ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಬೇಲೆಕೇರಿ ಅಕ್ರಮ ಅದಿರು(_Belekeri Iron ore) ಸಾಗಾಟ ಪ್ರಕರಣ ಸಂಬಂಧಿಸಿ ಬಂಧಿತರಾದ ಕಾರವಾರ ಶಾಸಕ ಸತೀಶ ಸೈಲ್(MLA Satish Sail) ಅವರನ್ನ ಸಪ್ಟೆಂಬರ್ 12ರವರೆಗೆ ಇಡಿ ಕಸ್ಟಡಿಗೆ(ED Custody) ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ನಿನ್ನೆ ರಾತ್ರಿ ಬಂಧಿತರಾಗಿದ್ದ. ಶಾಸಕ ಸತೀಶ್ ಸೈಲ್(MLA Satish Sail) ಅವರನ್ನು ಒಂದು ಇಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಸೈಲ್ ಅವರನ್ನು ಇನ್ನೂ ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ.
ಬೇಲೇಕೇರಿ ಬಂದರಿನಿಂದ(Belekeri Port) ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳ ತಂಡ ಶಾಸಕ ಸತೀಶ ಸೈಲ್ ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಕಳೆದ ಅಗಸ್ಟ್ 13ರಂದು ದಾಳಿ ನಡೆಸಿತ್ತು. ಇದೀಗ ಈ ಪ್ರಕರಣ ಸಂಬಂಧಿಸಿ ಮತ್ತೆ ಸೈಲ್ ಕಾನೂನು ಹೋರಾಟ ಮಾಡಬೇಕಾಗಿದೆ.
ಕಳೆದ 14 ವರ್ಚಗಳೊಂದ ಅಂಕೋಲಾದ ಬೇಲೇಕೇರಿ ಬಂದರಿನಿಂದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರು ನಾಪತ್ತೆಯಾಗಿತ್ತು. ಅಕ್ರಮವಾಗಿ ಸಾಗಾಣಿಕೆ ಮಾಡಿದ ಆರೋಪದಲ್ಲಿ ಶಾಸಕ ಸತೀಶ್ ಸೈಲ್ ವಿರುದ್ಧ ತನಿಖೆ ನಡೆಯುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ವರ್ಷ ಸೈಲ್ ಸೇರಿದಂತೆ ಆರೋಪಿಗಳಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆಗೆ, ದಂಡವನ್ನು ವಿಧಿಸಲಾಗಿತ್ತು. ಆದರೆ, ಈ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದರಿಂದ ಸೈಲ್ ಜಾಮೀನಿನ ಮೇಲೆ ಹೊರಗಿದ್ದರು.
ಸೈಲ್ ಬಂಧನಕ್ಕೆ ಡಿಕೆಶಿ ಪ್ರತಿಕ್ರಿಯೆ: ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನಕ್ಕೆ ಸಂಬಂಧಿಸಿ ಡಿಸಿಎಂ ಡಿ ಕೆ ಶಿವಕುಮಾರ್(D K Shivakumar) ಪ್ರತಿಕ್ರೀಯಿಸಿದ್ದು, “ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.
ಇದನ್ನು ಓದಿ : ಕಂದಾಯ ಇಲಾಖೆಯಲ್ಲಿ ಏಜೆಂಟರ ಹಾವಳಿ. ಸಚಿವ ಮಂಕಾಳ ವೈದ್ಯ ಕಿಡಿಕಿಡಿ.
ಬೆಳಗಾವಿಯ ಆಸ್ಪತ್ರೆಯಲ್ಲಿ ಆತಂಕ ಮೂಡಿಸಿದ್ದ ಕಾರವಾರ ಮೂಲದ ಯುವತಿ.
ಬೆಂಗಳೂರಿನಲ್ಲಿ ಶಾಸಕ ಸತೀಶ ಸೈಲ್ ಬಂಧಿಸಿದ ಇಡಿ ಅಧಿಕಾರಿಗಳು. ಕೇಸ್ ಹಿಸ್ಟ್ರೀ ಏನು?