ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 2024 ಕ್ಕೆ ಸಂಬ0ಧಿಸಿದ0ತೆ, ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷತನ ತೋರಿದ 3 ಮಂದಿ ಬಿಲ್ ಕಲೆಕ್ಟರ್‌ಗಳನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಗುರುವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ಇದನ್ನು ಓದಿ. ಶಾಲೆಗಳಿಗೆ ರಜೆಯಿಲ್ಲ
ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿ.ಎಲ್.ಓ ಕರ್ತವ್ಯ ನಿರ್ವಹಿಸುತ್ತಿದ್ದ 3 ಮಂದಿ ಬಿಲ್ ಕಲೆಕ್ಟರ್‌ಗಳು ಚುನಾವಣಾ ಸಂಬ0ದಿತ ಎಲ್ಲಾ ಕರ್ತವ್ಯದಲ್ಲಿ ನಿರ್ಲಕ್ಷತನ ತೋರಿಸುತ್ತಿದ್ದ ಹಿನ್ನಲೆಯಲ್ಲಿ , ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.