ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಉಡುಪಿ(Udupi): ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಗೆ(Electric Scooty)  ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ(Udupi) ನಡೆದಿದೆ.

ಸವಾರ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬೆಂಕಿ ಹೊತ್ತಿ ಕೊಂಡಿದ್ದರಿಂದ ತಕ್ಷಣ ರಸ್ತೆ ಮಧ್ಯೆಯೇ ಸ್ಕೂಟಿಯನ್ನು ನಿಲ್ಲಿಸಿ ಸವಾರ ದೂರ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಬಳಿಕ ಸ್ಥಳೀಯರು ನೀರು ಸುರಿದು ಸ್ಕೂಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ಸ್ಕೂಟಿಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರಬಹುದೆಂದು ಶಂಕಿಸಲಾಗಿದೆ.