ಕಾರವಾರ: ಹೊಸ ಕಾಳಿ ಸೇತುವೆಯಲ್ಲಿ ರಾತ್ರಿ ಸಂಚಾರಕ್ಕೆ ಅನುಕೂಲವಾಗುವಂತೆ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ. ರಾತ್ರಿ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ವಿದ್ಯುತ್ ವ್ಯವಸ್ಥೆ ಇಲ್ಲದೇ  ತೊಂದರೆಯಾಗುತ್ತಿರುವ ಬಗ್ಗೆ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು.

ತುರ್ತಾಗಿ ಸೇತುವೆ ಮೇಲೆ ವಿದ್ಯುತ್ ಕಂಬ ಅಳವಡಿಸಿ ಬೆಳಕು ನೀಡುವಂತೆ ಸಂಬಂಧಪಟ್ಟ ಐಆರ್ಬಿ ಕಂಪನಿಗೆ  ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಸೂಚಿಸಿದ್ದರು.

ಹಳೆಯ ಕಾಳಿ ಸೇತುವೆ ಮಧ್ಯರಾತ್ರಿ ಕುಸಿದಿದ್ದರಿಂದ ಹೊಸ ಸೇತುವೆಯ ಮೇಲೆ ದ್ವಿ ಮಾರ್ಗದ ಸಂಚಾರ ಆರಂಭವಾಗಿದ್ದು, ರಾತ್ರಿಯ ವೇಳೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆಯಾಗುತ್ತಿತ್ತು. ಈ ಬಗ್ಗೆ ಜಯ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ  ಮನವಿ ಮಾಡಿದ್ದರು.

ಮನವಿಯನ್ನು ಪುರಸ್ಕರಿಸಿ ತಕ್ಷಣ  ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ.  ಹೀಗಾಗಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಸಾರ್ವಜನಿಕರ ಪರವಾಗಿ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೇಕರ್ ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದೆ ಹಂತ ಹಂತವಾಗಿ ಸೇತುವೆ ಮೇಲೆ ಶಾಶ್ವತ ವಿದ್ಯುತ್ ಕಂಬ ಅಳವಡಿಸುವಂತಾಗಲಿ ಎಂದು ಸಂಘಟನೆಯ ವತಿಯಿಂದ ಜಯ ಕರ್ನಾಟಕ ಜನಪರ ಸಂಘಟನೆಯ ಜಿಲ್ಲಾಧ್ಯಕ್ಷ ದಿಲೀಪ್ ಅರ್ಗೇಕರ್, ಜಿಲ್ಲಾ ಕಾರ್ಯಾಧ್ಯಕ್ಷ ರೋಷನ್ ಹರಿಕಂತ್ರ, ಜಿಲ್ಲಾ ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಮತ್ತು ರಫೀಕ್ ಹುದ್ದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯ್ಕ, ಜಿಲ್ಲಾ ಸಂಚಾಲಕ ಸುನೀಲ್ ತಾಂಡೆಲ್, ಕಾರವಾರ ತಾಲ್ಲೂಕು ಅಧ್ಯಕ್ಷ ಮೋಹನ ಉಳ್ವೇಕರ್ ಮತ್ತು ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ.