ತುಮಕೂರು : ಹಾಸ್ಟೆಲೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯಾರ್ಥಿನಿಯರು ಹೊರಗೆ ಓಡಿ ಬಂದ ಘಟನೆ ತುಮಕೂರಿನಲ್ಲಿ  ನಡೆದಿದೆ.

ತುಮಕೂರಿನ ಬಿ.ಹೆಚ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನ ಲೈವ್ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ  ಹಾಸ್ಟೆಲ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ.  ಪಟಾಕಿ ಹೊಡೆದಂತೆ ಶಬ್ದದಂತೆ ಬೆಂಕಿಯಾಗಿದೆ. ಸುಮಾರು 10 ನಿಮಿಷಗಳ ಕಾಲ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಶಬ್ದದಿಂದ ವಿದ್ಯಾರ್ಥಿನಿಯರು ಆತಂಕಕ್ಕೊಳಗಾಗಿದ್ದರು.

ಘಟನೆಯಿಂದ  ಹಾಸ್ಟೆಲ್ ತುಂಬಾ ಹೊಗೆ ಆವರಿಸಿದ್ದರಿಂದ ವಿದ್ಯಾರ್ಥಿನಿಯರು ಹೊರಗೆ ಓಡಿ ಬಂದು ಜೀವ ಉಳಿಸಿಕೊಂದಿದ್ದಾರೆ. ಹಾಸ್ಟೆಲನಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ.