ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಜೋಯಿಡಾ(Joida) : ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೆಘಾಟ್‌ನ ಗವೆಗಾಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗೋವಾ–ಬೆಳಗಾವಿ ಹೆದ್ದಾರಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಬೊಲೆರೋ ಪಿಕಪ್ ಹಾಗೂ ಸ್ವಿಫ್ಟ್ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ಮೂವರಿಗೆ ರಾಮನಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಆಂಧ್ರಪ್ರದೇಶ ಮೂಲದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಓವರ್‌ಟೇಕ್ ಮಾಡುವ ವೇಳೆ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆ ಕುರಿತು ಜೋಯಿಡಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನು ಓದಿ : ಭಟ್ಕಳ ಮುರಿನಕಟ್ಟಾ ವಿವಾದ : 40 ಜನ ವಶಕ್ಕೆ, 5 ಪ್ರಕರಣ ದಾಖಲು
