ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.
ಆಸ್ಪತ್ರೆಗ ಚಿಕಿತ್ಸೆಗೆ ಕರೆದುಕೊಂಡ ಹೋದ ವೇಳೆ ಮೃತಪಟ್ಟಿದ್ದಾರೆ. ನಂದನಗದ್ದಾ ನಿವಾಸಿ ಫಂಡರೀನಾಥ ವಿ. ನಾಯ್ಕ (52) ಮೃತ ದುರ್ದೈವಿ. ಕಾರವಾರ ತಹಶೀಲ್ದಾರ್ (Karwar Tahasildar) ಕಚೇರಿಯ ಕಂದಾಯ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಎಂದಿನಂತೆ ಬೆಳಗ್ಗೆ ಕಚೇರಿಗೆ ಆಗಮಿಸಿದ್ದ ಅವರು, ಸುಮಾರು 11 ಗಂಟೆ ವೇಳೆಗೆ ಕಚೇರಿಯಲ್ಲಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಇದರಿಂದ ಆತಂಕಗೊಂಡ ಕಚೇರಿ ಸಿಬ್ಬಂದಿ ತಕ್ಷಣ ಅವರನ್ನು ತಹಶೀಲ್ದಾರ್ ಅವರ ಜೀಪ್ನಲ್ಲಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಆರೋಗ್ಯದಲ್ಲಿ ಚೇತರಿಕೆ ಕಾಣಿಸದೆ ಫಂಡರೀನಾಥ ನಾಯ್ಕ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ಆಕಸ್ಮಿಕವಾಗಿ ಮೃತಪಟ್ಟಿರುವುದಕ್ಕೆ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು
ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.