ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಜುಲೈ 21ರವರೆಗೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಜುಲೈ 20ರಂದು ತುರ್ತು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ .

ಈಗಾಗಲೇ ಬಿದ್ದ ಮಳೆಯಿಂದ ಬಹುತೇಕ ಕಡೆಗಳಲ್ಲಿ ಹಳ್ಳಕೊಳ್ಳಗಳು ತುಂಬಿದ್ದು ಅಪಾಯದ ಮುನ್ಸೂಚನೆ ಇದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅದೇಶಿಸಿದ್ದಾರೆ.

ಜುಲೈ 21 ರವರೆಗೆ ಬಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿಗಳು ರಜೆ ಮುಂದುವರಿಸಿದ್ದಾರೆ. ಮುಂದಿನ ವಾತಾವರಣ ತಿಳಿದು ನಿರ್ಣಯ ತೆಗೆದುಕೊಳ್ಳಲಿದ್ದಾರೆ.