ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಮಟಾ(Kumta) : ಪಟ್ಟಣದ ಗಿಬ್ ಸರ್ಕಲ್(Gibb Circle) ಸಮೀಪದಲ್ಲಿದ್ದ ಚಪ್ಪಲಿ ಅಂಗಡಿಯಲ್ಲಿ(Footwear Shop) ಬೆಂಕಿ ಅವಘಡ ಸಂಭವಿಸಿದೆ.
ಕಳೆದ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅನಾಹುತ ಸಂಭವಿಸಿದೆ. ಖಾದಿಮ್ ಎಂಬುವವರ ಮಾಲಿಕತ್ವದ ಚಪ್ಪಲಿ ಅಂಗಡಿಯಲ್ಲಿ(Footwear Shop) ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು ಎಂಟು ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಅಂಗಡಿಯೊಳಗೆ ಧಗಧಗನೆ ಬೆಂಕಿ ಹೊತ್ತಿ ಉರಿದಿದ್ದು, ಬೆಂಕಿಯ ತೀವ್ರತೆಗೆ ಸ್ಥಳೀಯರು ಕಂಗಾಲಾದರು. ಅಂಗಡಿಯಲ್ಲಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಪ್ಪಲಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾದವು.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಲು ಹರಸಾಹಸಪಟ್ಟರು. ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಪಕ್ಕದ ಅಂಗಡಿಗಳಿಗೆ ವ್ಯಾಪಿಸದಂತೆ ತಡೆಯಲಾಯಿತು.
ಈ ಘಟನೆ ಕುಮಟಾ ಪೊಲೀಸ್ ಠಾಣಾ(Kumta Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ವೇ ಅಗ್ನಿ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಇದನ್ನು ಓದಿ : ಜಾತ್ರೆಗೆ ಬರಬೇಕಾದ ಹಣ ಮಂಗ ಮಾಯಾ. ಅನಂತಮೂರ್ತಿ ಹೆಗಡೆ ಗಂಭೀರ ಆರೋಪ.
