ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ತರಕಾರಿ ಮತ್ತು ಹಣ್ಣಿನ ಅಂಗಡಿಗೆ ಬೆಂಕಿ(Fire) ತಾಗಿ ಹೊತ್ತಿ ಉರಿದ ಘಟನೆ ಭಟ್ಕಳ(Bhatkal) ತಾಲೂಕಿನ ಜಾಲಿ ಕ್ರಾಸ್ ಬಳಿ ನಡೆದಿದೆ.

ಇಲ್ಲಿನ “ತಾಸಿನ್ ಪ್ರೂಟ್ಸ್ ಎಂಡ್  ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಬೆಂಕಿಯಿಂದ(Fire)  ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕಿಸಲಾಗಿದೆ. ಮಧ್ಯಾಹ್ನ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಅಂಗಡಿ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ. ಆಕಾಶದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಅನಾಹುತದ ಪರಿಣಾಮವಾಗಿ ಲಕ್ಷಾಂತರ ಮೌಲ್ಯದ ಹಣ್ಣು-ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ(Fire Brigade) ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಅಗ್ನಿಯ ತೀವ್ರತೆಗೆ ಸಾಧ್ಯವಾಗಲಿಲ್ಲ. ಬಳಿಕ ಹೊನ್ನಾವರ(Honnavar) ಮತ್ತು ಬೈಂದೂರು(Bainduru) ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಈ ರೀತಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.

ಖಾಸಗಿ ಪೋಟೋ ಇದೆಯೆಂದು ಲಕ್ಷಲಕ್ಷ ಪೀಕಲು ಮುಂದಾದ ಮೂವರು ಆರೆಸ್ಟ್.