ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ(Karwar) : ತಾಲೂಕಿನ ಶಿರವಾಡದಲ್ಲಿ ಕಾರವಾರ ನಗರಸಭೆಗೆ(Karwar CMC) ಸೇರಿದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ(Dumping Yard) ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ  ರಾತ್ರಿ ಸಂಭವಿಸಿದೆ.

ರಾತ್ರಿ ವೇಳೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕದ ಪ್ಲಾಸ್ಟಿಕ್ ಸಂಗ್ರಹ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿಕೊಂಡ ಪರಿಣಾಮ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆಂಕಿಯ ಮಾಹಿತಿ ಲಭಿಸಿದ ತಕ್ಷಣ ಕಾರವಾರ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚುವರಿಯಾಗಿ ಅಂಕೋಲಾ(Ankola) ಅಗ್ನಿಶಾಮಕ ವಾಹನ ಹಾಗೂ ಗ್ರಾಸಿಂ ಇಂಡಸ್ಟ್ರೀಸ್‌ನ ಅಗ್ನಿಶಾಮಕ ವಾಹನಗಳ ಸಹಾಯವನ್ನು ಪಡೆಯಲಾಯಿತು.

ಹಲವಾರು ಗಂಟೆಗಳ ನಿರಂತರ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನಾ ಸ್ಥಳದಲ್ಲಿ ನಗರಸಭೆಯ(CMC) ಅಧಿಕಾರಿಗಳು ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು  ಪರಿಶೀಲಿಸಿದರು.

ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತ ಜನವಸತಿ ಪ್ರದೇಶ ಇರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನು ಓದಿ : ಅನಾರೋಗ್ಯದ ಕಾರಣ ಶಾಸಕ‌ ಸತೀಶ ಸೈಲ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು.

ಖೈದಿಗಳಿಗೆ ಅಕ್ರಮವಾಗಿ ಗಾಂಜಾ, ಸಿಗರೇಟ್ ಹಾಗೂ ಮೊಬೈಲ್ ಪೂರೈಕೆ – ಮೂವರು ಆರೋಪಿಗಳ ಬಂಧನ

ಬಿಜೆಪಿ ಮುಖಂಡನ ಹತ್ಯೆಗೆ ಸಂಚು ಪ್ರಕರಣ. ಕೊಲೆ ಮಾಡಲು ಬಂದ ಗುಂಪಿನವನೇ ಫಿನಿಶ್ ಆದ ಕಥೆ.*