ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಉಡುಪಿ(Udupi) : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣವೊಂದರಲ್ಲಿ(Commercial Complex) ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಉಡುಪಿ ಸಿಟಿ ಬಸ್ ನಿಲ್ದಾಣದ(Udupi City Busstand) ಸಮೀಪದಲ್ಲಿರುವ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಕಟ್ಟಡದಲ್ಲಿದ್ದ ಮೊಬೈಲ್ ಅಂಗಡಿ(Mobile Shop) ಹಾಗೂ ಹಾರ್ಡ್ವೇರ್ ಅಂಗಡಿಯಲ್ಲಿ(Hardware Shop) ಮೊದಲು ಬೆಂಕಿ ಕಾಣಿಸಿಕೊಂಡಿರುವುದು ತಿಳಿದುಬಂದಿದೆ.
ಬೆಂಕಿಯ ತೀವ್ರತೆಗೆ ಕಟ್ಟಡದಲ್ಲಿದ್ದ ಅಮೂಲ್ಯ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣವನ್ನು ಅಗ್ನಿಶಾಮಕ ಇಲಾಖೆ(Fire Brigade) ಪರಿಶೀಲಿಸುತ್ತಿದೆ. ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಇದನ್ನು ಓದಿ : ಕದ್ದ ಚಿನ್ನದ ಸರ ಎಗರಿಸಿ ಗಟ್ಟಿ ಮಾಡಿದ ಮಹಿಳೆ. ಪೊಲೀಸರಿಂದ ಬಂಧನ.
