ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು (Bangaluru): ಉತ್ತರಕನ್ನಡ(Uttarakannada) ಜಿಲ್ಲೆಯಲ್ಲಿ ಜಿಲ್ಲೆಯ ಪರಿಸರ ಮತ್ತು ಜನಸಾಮಾನ್ಯರ ಹಿತವನ್ನು ಕಡೆಗಣಿಸಿ ಸಾಂಪ್ರದಾಯಿಕ ಮೀನುಗಾರಿಕೆ(Traditional Fishing), ಮೀನುಗಾರರ ಜೀವನೋಪಾಯ ಮತ್ತು ವಸತಿ ನೆಲೆಗಳಿಗೆ ಆತಂಕ ಆಗುವಂತೆ ಜಿಲ್ಲೆಯ ಕರಾವಳಿಯ(Coastal) ಧಾರಣಾ ಸಾಮರ್ಥ್ಯ ವನ್ನು ಮೀರಿ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕ(Kasarakod Tonka) ಮತ್ತು ಅಂಕೋಲಾದ ಕೇಣಿಯಲ್ಲಿ (Ankola Keni) ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ ಖಾಸಗಿ ಮೂಲದ ವಾಣಿಜ್ಯ ಬಂದರು ನಿರ್ಮಾಣ ಯೋಜನೆ ಮತ್ತು ಕಾರವಾರದ ಬಂದರನ್ನು ರವೀಂದ್ರನಾಥ ಠಾಗೋರ ಕಡಲತೀರದವರೆಗೆ(Rabindranath Tagore Beach)  ವಿಸ್ತರಣೆ ಮಾಡುವ ಸರ್ಕಾರದ ಅವೈಜ್ಞಾನಿಕ ಪರಿಸರ ವಿರೋಧಿ ಧೋರಣೆಯನ್ನು  ಕೈಬಿಡುವಂತೆ ರಾಷ್ಟ್ರೀಯ ಮೀನುಗಾರ ಕಾರ್ಮಿಕರ ವೇದಿಕೆ (Fisherman Forum) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಮಂಗಳವಾರ ರಾಷ್ಟ್ರೀಯ ಮೀನುಗಾರ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ತಾಂಡೇಲ, ಪ್ರಧಾನ ಕಾರ್ಯದರ್ಶೀ ಅಲೆನ್ಸಿಯೋ ಸಿಮೋಯಿಸ್, ಸಂಯೋಜಕ ವಿಕಾಸ ತಾಂಡೇಲ, ಉಜ್ವಲಾ ಪಾಟೀಲ , ಲಕ್ಷೀ.ಟಿ. ಮತ್ತು ರಾಷ್ಟ್ರೀಯ ಮೀನುಗಾರರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ, ಕಾಸರಕೋಡ ಟೊಂಕದ ಬಂದರು ವಿರೋದಿ ಹೋರಾಟ ಸಮೀತಿಯ ರಾಜೇಶ ತಾಂಡೇಲ, ಗಣಪತಿ ತಾಂಡೇಲ, ರಿಜ್ವಾನ ಮೈದಿನ ಸಾಬ, ಅನ್ಸಾರ ಇಷ್ಮಾಯಿಲ ಸಾಬ,  ರಾಜು ಈಶ್ವರ ತಾಂಡೇಲ, ಅಂಕೋಲಾ ಕೇಣಿಯ ಬಂದರು ವಿರೋಧಿ ಹೋರಾಟ ಸಮೀತಿಯ ಸಂಜೀವ ಬಲೇಗಾರ, ಜ್ಞಾನೇಶ್ವರ , ಗಿರೀಶ ಹರಿಕಂತ್ರ ಮತ್ತು ಉ.ಕ.ಮೀನುಗಾರರ ಫೆಡರೇಷನ್  ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪ್ರಮುಖರು  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiha) ಅವರನ್ನು ಭೇಟಿ ಮಾಡಿ ಆಗ್ರಹ ಪಡಿಸಿದರು.

ಈ ಸಂದರ್ಭದಲ್ಲಿ ಮೀನುಗಾರರ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಸಭೆ ನಡೆಸಿದ ಮುಖ್ಯ ಮಂತ್ರಿಗಳು ಅಹವಾಲು ಆಲಿಸಿ ಮನವಿ ಸ್ವೀಕರಿಸಿ ಮಾತನಾಡಿ, ಮೀನುಗಾರರ ಬೇಡಿಕೆಗಳು ನನಗೆ ಮನವರಿಕೆಯಾಗಿದೆ. ಬಂದರು ವಿರೋಧಿ ಹೋರಾಟದಲ್ಲಿ ಹಿಂದೆ ಮುಂಚೂಣಿಯಲ್ಲಿದ್ದ ಅಂದಿನ ಶಾಸಕ ಮಂಕಾಳ ವೈದ್ಯರೇ ಇಂದು ಬಂದರು ಖಾತೆ ಸಚಿವರಾಗಿದ್ದಾರೆ. ಅವರನ್ನು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಚರ್ಚಿಸುತ್ತೇನೆ. ಸಮಸ್ಯೆ ಬಗೆಹರಿಸುವ  ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಸಾದ್ಯವಾದರೆ ಜಿಲ್ಲೆಗೆ ಭೇಟಿ ನೀಡುವದಾಗಿ ಜಿಲ್ಲೆಗೆ ಬರಲು ಆಹ್ವಾನ ನೀಡಿದ ನಿಯೋಗಕ್ಕೆ ಸಿಎಂ ತಿಳಿಸಿದರು. ಮೀನುಗಾರರ ಜೀವನೋಪಾಯಕ್ಕೆ ಮತ್ತು ಮೀನುಗಾರರ ಪರಂಪರಾಗತ ವಸತಿ ನೆಲೆಗಳಿಗೆ ಆತಂಕ ಆಗುವಂತೆ ಪೋಲಿಸ್ ಬಲಪ್ರಯೋಗದಲ್ಲೀ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರು ನಿರ್ಮಿಸುವ ಅವೈಜ್ಞಾನಿಕ ಜನವಿರೋಧಿ ಕ್ರಮವನ್ನು ತಡೆಯಲು ಮತ್ತು ಅಮಾಯಕ-ಬಡ ಮೀನುಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಜೈಲಿಗೆ ಕಳಿಸಿರುವ ಮತ್ತು ದೌರ್ಜನ್ಯ ಎಸಗಿದ ಬಗ್ಗೆ ಹಾಗೂ ಕರಾವಳಿಯ ಧಾರಣಾಶಕ್ತಿಯ ಸಾಮರ್ಥ್ಯವನ್ನು ಮೀರಿ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರು (Commercial port) ನಿರ್ಮಾಣ ಮಾಡುವ ಅವೈಜ್ಞಾನಿಕ , ಪರಿಸರ ವಿರೋಧಿ ಮತ್ತು ಮೀನುಗಾರಿಕೆ ವಿರೋಧಿ ನೀತಿಯನ್ನು ಕೈಬಿಡಬೇಕು ಎಂದು ನಿಯೋಗದವರು ಮುಖ್ಯಮಂತ್ರಿಗಳನ್ನ ಮನವಿ ಮಾಡಿದರು.

ಜಿಲ್ಲೆಯ ಪರಿಸರ(Environment), ಜೀವ ವೈವಿಧ್ಯತೆ(Bio Diversity) ಮತ್ತು ಜನರ ಜೀವನೋಪಾಯವನ್ನು ಕಡೆಗಣಿಸಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಜನರ ಜೀವನೋಪಾಯಕ್ಕೆ ಆತಂಕ ಆಗುವಂತೆ ಜಿಲ್ಲೆಯ ಕಡಲತೀರಗಳ ಧಾರಣಾ ಸಾಮರ್ಥ್ಯವನ್ನು ಮೀರಿ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರುಗಳನ್ನು ನಿರ್ಮಿಸಲು ಸರ್ಕಾರ ಮತ್ತು ಸ್ಥಳಿಯ ಆಡಳಿತವು ಖಾಸಗೀ ಸಹಭಾಗಿತ್ವದಲ್ಲಿ ಯತ್ನಿಸುತ್ತಿರುವದು ಸರಿಯಲ್ಲ. ಇದು ತೀರಾ ಅವೈಜ್ಞಾನಿಕ, ಅವಾಸ್ತವಿಕ ಮತ್ತು  ಅತ್ಯಂತ ಅಪಾಯಕಾರಿ ಜನವಿರೋದಿ  ನೀತಿಯಾಗಿದೆ.

ಅದರಲ್ಲೂ  ಲಕ್ಷಾಂತರ ಜನರ ಜೀವನೋಪಾಯಕ್ಕೆ ಅಡ್ಡಿಯಾಗುವಂತೆ  ಪರಿಸರ ವಿರೋಧಿ ವಾಣಿಜ್ಯ ಬಂದರು ಯೋಜನೆಯನ್ನು  ಪೊಲೀಸ್ ಬಲಪ್ರಯೋಗದ ಮೂಲಕ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಬಲವಂತದಿಂದ ಜನರ ಮೇಲೆ ಹೇರಲು ಯತ್ನಿಸುತ್ತಿರುವದು ನಮ್ಮ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದಲ್ಲಿ ಮತ್ತು ಅಂಕೋಲಾದಲ್ಲಿ ನಡೆಯುತ್ತಿರುವದು ಅಲ್ಲೀ ವಿದ್ಯಮಾನಗಳಿಂದ ಸ್ಪಷ್ಟವಾಗಿದೆ. ಇಲ್ಲಿನ ಕಾಸರಕೋಡ ಟೊಂಕ ಗ್ರಾಮದ ಕಡಲತೀರದಲ್ಲಿ ಇಲ್ಲಿನ ಸಾವಿರಾರು ಮಹಿಳೆಯರು ಇಲ್ಲಿ ಒಣ ಮೀನುಗಾರಿಕೆ ಉದ್ಯಮದಲ್ಲಿ ತಮ್ಮ ಜೀವನೋಪಾಯವನ್ನು ಸಾಗಿಸುತ್ತಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮೀನುಗಾರರ ಕುಟುಂಬಗಳು ಸಾಂಪ್ರದಾಯಿಕ ಮೀನುಗಾರಿಕೆಯೊಂದಿಗೆ ಇಲ್ಲಿನ ಕಡಲತೀರದಲ್ಲಿ ಪಾರಂಪರಿಕವಾಗಿ ತಮ್ಮ ಬದುಕನ್ನು ಕಟ್ಟಿಕೊಂಡಿವೆ. ಇದರ ಜೊತೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಸಂಖ್ಯೆಯ ಮೀನುಗಾರರು ಯಾಂತ್ರಿಕ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು ಇರುತ್ತದೆ. ಹೀಗಿರುವಲ್ಲಿ  ಇಲ್ಲಿನ ಪರಿಸರ ಸೂಕ್ಷ್ಮ ಕಡಲ ತೀರಕ್ಕೆ ಹೊಂದಿಕೊಂಡಿರುವ 4 ಕೀ.ಮೀ. ಉದ್ದದ ಮೀನುಗಾರರ ಪರಂಪರಾಗತ ವಸತಿ ನೆಲೆಯ ಹತ್ತಿರ, ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮತ್ತು ಧೂಳು ಮಿಶ್ರಿತ ಸರಕುಗಳ ಸಾಗಾಟ, ಸಂಗ್ರಹ ಆಮದು ರಪ್ತು ಬಹು ಉದ್ದೇಶಿಸಿತ ವಾಣಿಜ್ಯ ಬಂದರು ನಿರ್ಮಾಣ ಮಾಡುವ ಮತ್ತು ಈ ಉದ್ದೇಶಿತ ಖಾಸಗಿ ಮೂಲದ ಯೋಜನೆಗಾಗಿ ಚತುಷ್ಪಥ ರಸ್ತೆ ಮತ್ತು ರೈಲು ಮಾರ್ಗದ ನಿರ್ಮಾಣ ಮಾಡಲು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಇಲ್ಲಿನ ಬಂದರು ಇಲಾಖೆಯ ಕೆಲ ಅಧಿಕಾರಿಗಳು ಮತ್ತು ಎಚ್.ಪಿ.ಪಿ.ಎಲ್ (HPPL) ಕಂಪೆನಿಯವರು ಸೇರಿ ಇಲ್ಲಿನ ಮೀನುಗಾರರನ್ನು ಬಲವಂತದಿಂದ  ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿರುವ ಬಗ್ಗೆ ನಿಯೋಗ ಮುಖ್ಯ ಮಂತ್ರಿಗಳ ಗಮನ ಸೆಳೆಯಿತು.

      ಇನ್ನೊಂದೆಡೆ ಅಗತ್ಯ ಅಧ್ಯಯನ ಮಾಡದೇ ಜಿಲ್ಲೆಯಲ್ಲಿ ಪರಿಸರ, ಜೀವ ವೈವಿಧ್ಯತೆ, ಜನರ ಆರೋಗ್ಯ ಮತ್ತು ಜೀವನೋಪಾಯಕ್ಕೆ ಮಾರಕವಾಗುವ ಬಹು ಉದ್ದೇಶಿತ ವಾಣಿಜ್ಯ ಬಂದರುಗಳ ನಿರ್ಮಾಣ ಮಾಡುವುದು ತೀರ ಅವೈಜ್ಞಾನಿಕ ಮತ್ತು ಮುಂದಿನ ಪೀಳಿಗೆಗೆ ಇದು ಅಪಾಯಕಾರಿ ಎಂದು ಅನೇಕ ತಜ್ಞರು ಎಚ್ಚರಿಸಿದ್ದು ಉದ್ದೇಶಿತ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈಬಿಡುವಂತೆ ಒತ್ತಾಯ ಪಡಿಸಿದ್ದಾರೆ.

ಕಡಲಾಮೆಗಳು ಮೊಟ್ಟೆ ಇಡುವ ಪರಿಸರ ಸೂಕ್ಷ್ಮ  ಮತ್ತು ಸಾಂಪ್ರದಾಯಿಕ ಮೀನುಗಾರಿಕೆಯ ಪ್ರಮುಖ ತಾಣವಾಗಿರುವ ಹಾಗೂ ಲಕ್ಷಾಂತರ ಜನರ ಕುಡಿಯುವ ನೀರಿನ ದೈನಂದಿನ ಅಗತ್ಯಗಳನ್ನು ಪೂರೈಸುತ್ತಿರುವ ಜೀವನದಿ ಶರಾವತಿಯ ಸಂಗಮ ಪ್ರದೇಶವಾಗಿರುವ ನಮ್ಮ  ತಾಲ್ಲೂಕಿನ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ಆಕ್ಷೇಪದ ನಡುವೆಯೂ, ಧೂಳು ಮಿಶ್ರಿತ ಸರಕುಗಳ ಹಾಗೂ ತೈಲ ಮತ್ತು ರಾಸಾಯನಿಕಗಳ ಸಾಗಾಟ, ಸಂಗ್ರಹ ಮತ್ತು ಆಮದು ರಪ್ತು ವಹಿವಾಟು ಉದ್ದೇಶದ  ಖಾಸಗಿ ಮೂಲದ ಬೃಹತ್ ವಾಣಿಜ್ಯ ಬಂದರು ನಿರ್ಮಿಸುವ ಉದ್ದೇಶದಿಂದ ಅವರಿಗೆ ರಸ್ತೆ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಈ ಭಾಗದಲ್ಲಿ ನಿಷೇದಾಜ್ಞೆ ಹೇರಿ ಸಾವಿರಾರು ಪೋಲಿಸರ ಬಂದೋಬಸ್ತಿನಲ್ಲಿ ಕಡಲಾಮೆಗಳು ಮೊಟ್ಟೆ ಇಡುವ ಇಲ್ಲಿನ ಪರಿಸರ ಸೂಕ್ಷ್ಮ ಕಡಲತೀರದಲ್ಲಿ 3ಕಿ.ಮೀ .ಉದ್ದಕ್ಕೂ ಅಸ್ತಿತ್ವದಲ್ಲಿರದ  ಕಚ್ಛಾ ರಸ್ತೆಯ ಸುಧಾರಣೆಯ ನೆಪದಲ್ಲಿ ಈ ಭಾಗದಲ್ಲಿ ಕಲ್ಲು ಮಣ್ಣು ಸುರಿದು ವನ್ಯ ಜೀವಿ ಕಾಯ್ದೆ ಸಹಿತ ವಿವಿಧ ನಿಯಮಗಳನ್ನು ಉಲ್ಲಂಘಿಸಿ ಇಲ್ಲಿ ಹೊಸದಾಗಿ ಪಕ್ಕಾ ರಸ್ತೆ ನಿರ್ಮಿಸುವ ಪ್ರಯತ್ನ ನಡೆಸಲಾಗಿದೆ.

ವಿವಿಧ ಕಾಯ್ದೆ ಉಲ್ಲಂಘಿಸಿ ಅಕ್ರಮ ಕಾಮಗಾರಿ ನಡೆಸಿದವರ ಮೇಲೆ ಈ ವರೆಗೆ ಕ್ರಮ ಆಗಿಲ್ಲ.ಇದೇ ಸಂದರ್ಭದಲ್ಲಿ ಇಲ್ಲಿನ ಪರಂಪರಾಗತ ಮೀನುಗಾರರ ವಸತಿ ನೆಲೆಯಲ್ಲಿನ ಜನರಿಗೆ ಯಾವದೇ ಪೂರ್ವ ಸೂಚನೆ ನೀಡದೇ ವಾಣಿಜ್ಯ ಬಂದರು ಯೋಜನೆಯ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವಾಗ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಗಾಗಿ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಉದ್ದೇಶಕ್ಕೆ ಭೂ ಸ್ವಾಧೀನಕ್ಕಾಗಿ ಪೋಲಿಸ್ ಬಲಪ್ರಯೋಗದಲ್ಲಿ ಸರ್ವೆ ಕಾರ್ಯ ನಡೆಸಿದೆ. ಇದನ್ನು ಪ್ರಶ್ನಿಸಿದವರನ್ನು ಪೋಲಿಸರು ಬಂಧಿಸಿ ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳಿಸಿರುವ ಅತೀರೇಖದ ಮಾನವ ಹಕ್ಕುಗಳನ್ನು ಧಮನಿಸುವ ಕಾರ್ಯ ಇಲ್ಲಿನ ಪೋಲಿಸ ಅಧಿಕಾರಿಗಳಿಂದ ನಡೆದಿದೆ. ಕೆಲವು ಪೋಲೀಸರ ಇತ್ತೀಚಿನ ನಡೆಯು ನಮ್ಮ ಹಕ್ಕುಗಳಿಗಾಗಿ ನಾಗರಿಕರು ಪ್ರಜಾಪ್ರಭುತ್ವ ಮಾದರಿಯ ಹೋರಾಟ ಮಾಡುವದು ಕೂಡ ತಪ್ಪು ಎನ್ನುವಂತಿದ್ದು, ಇಲ್ಲಿನ ಜನರು ಜೀವ ಭಯದಲ್ಲಿ ದಿನಕಳೆಯುವಂತಾಗಿದೆ.  

ಪರಿಸರ ಜೀವವೈವಿದ್ಯತೆ, ಮೀನುಗಾರಿಕೆ ಮತ್ತು ಲಕ್ಷಾಂತರ ಜನರ ಜೀವನೋಪಾಯಕ್ಕೂ ಆತಂಕ ಇರುವ ಉದ್ದೇಶಿತ ಕಾಸರಕೋಡ ಟೊಂಕದ ವಾಣಿಜ್ಯ ಬಂದರುನಿರ್ಮಾಣ ಯೋಜನೆಯನ್ನು ಈ ಮೇಲಿನ ಸಾರ್ವಜನಿಕ ಹಿತಾಸಕ್ತಿಯ ನೈಜ ಕಾರಣಕ್ಕಾಗಿ ಕೂಡಲೇ ಕೈಬಿಡಬೇಕೆಂದು  ನಿಯೋಗವು ಮುಖ್ಯಮಂತ್ರಿಗಳಿಗೆ ಒತ್ತಾಯ ಪಡಿಸಿದೆ.

ಇದನ್ನು ಓದಿ : ಕಾರವಾರದಲ್ಲಿ ದೇವಾಲಯ ಕಳ್ಳತನ. ಕಳ್ಳರ ಕೃತ್ಯ ಕ್ಯಾಮೆರಾದಲ್ಲಿ ಸೆರೆ.

ನಗೆ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ. ಶಾಲೆಗೆ ಪ್ರಿಡ್ಜ್ ಕೊಡುಗೆ.