ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕ ಬಂದರು(Kasarakodu Tonka Port) ಪ್ರದೇಶದಲ್ಲಿ ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ಗೆ(Fishing Boat) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.

ಆಯುಬ್ ಸಾಬ್ ಅವರಿಗೆ ಸೇರಿದ ಪರ್ಶಿಯನ್ ಬೋಟ್ ಅನ್ನು ಬಂದರಿನಲ್ಲಿ ನಿಲ್ಲಿಸಿ ದುರಸ್ತಿ ಹಾಗೂ ಇತರೆ ಕೆಲಸಗಳನ್ನು ನಡೆಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕ್ಷಣಾರ್ಧದಲ್ಲೇ ಬೋಟ್‌ನಾದ್ಯಂತ ವ್ಯಾಪಿಸಿ ಭಾರೀ ಅನಾಹುತಕ್ಕೆ ಕಾರಣವಾಗಿದೆ.

ಸ್ಥಳೀಯ ಮೀನುಗಾರರು(Fisherman’s) ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ, ಅಷ್ಟರಲ್ಲೇ ಬೋಟ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು.

ಈ ಅಗ್ನಿ ಅವಘಡದಿಂದ ಸುಮಾರು ₹30 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಹೊನ್ನಾವರ ಪೊಲೀಸ್(Honnavar Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.