ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಂದಾಪುರ (Kundapur): ತಿಮಿಂಗಿಲ ವಾಂತಿಯ ಅಕ್ರಮ ಮಾರಾಟದ ಖಚಿತ ಮಾಹಿತಿ ಆಧರಿಸಿ ಶೋಧ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೋಡಿ (Kodi) ಸಮುದ್ರ ತೀರದಲ್ಲಿ ನಡೆದಿದೆ.
ಉಡುಪಿ(Udupi) ಜಿಲ್ಲೆಯ ಕುಂದಾಪುರ ಕೋಡಿಯಲ್ಲಿ(Kundapur Kodi) ಅಂಬರ್ ಗ್ರೀಸ್(Ambergris) ಡೀಲ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಪ್ತಿಯಲ್ಲಿ ಅರಣ್ಯ ಇಲಾಖೆಯ(Forest Department) ಸಿಐಡಿ(CID) ವಿಭಾಗದ ಅಧಿಕಾರಿಗಳು ಆಗಮಿಸಿದ್ದರು. ಶೋಧ ಕಾರ್ಯಾಚರಣೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲು ತಂಡ ಮುಂದಾಗಿತ್ತು. ಸ್ಥಳೀಯರಿಗೆ ಸರಿಯಾದ ಮಾಹಿತಿ ಇಲ್ಲದೆ ಇರುವುದರಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ತಳ್ಳಾಟ ನಡೆದಿದೆ. ಪರಿಣಾಮವಾಗಿ ಅಧಿಕಾರಿಗಳಿಗೆ ಗಾಯವಾಗಿದ್ದು ಕುಂದಾಪುರ (Kundapur) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆರು ತಿಂಗಳ ಹಿಂದೆ ಕೋಟ ಮಣೂರಿನಲ್ಲಿ ಸಿಐಡಿ ಸೋಗಿನಲ್ಲಿ ದರೋಡೆಕೋರರು ಬಂದು ಮನೆ ದರೋಡೆಗೆ ವಿಫಲ ಪ್ರಯತ್ನ ಮಾಡಿದ್ದರು. ಸಿಸಿಟಿವಿ ಕ್ಯಾಮೆರಾದಲ್ಲಿ ದರೋಡೆ ಯತ್ನದ ದೃಶ್ಯ ಸೆರೆಯಾಗಿತ್ತು. ಈ ಘಟನೆ ನೆನಪಿಸಿಕೊಂಡ ಜನರು ಇದು ಕೂಡ ಅಂತಹದ್ದೇ ಮತ್ತೊಂದು ದರೋಡೆ ಯತ್ನ ಎಂದು ತಪ್ಪು ತಿಳಿದು ಅಧಿಕಾರಿಗಳ ಜೊತೆಗೆ ಸಂಘರ್ಷ ನಡೆಸಿದ್ದಾರೆ ಎನ್ನಲಾಗಿದೆ.
ಕರಾವಳಿ ಭಾಗದಲ್ಲಿ ಅಂಬರ್ ಗ್ರೀಸ್ ವ್ಯವಹಾರ ನಡೆಯುವ ಮಾಹಿತಿ ಇದ್ದು ಆರೋಪಿಗಳಿಗೆ ಹೆಡೆ ಮುರಿ ಕಟ್ಟಲು ಅರಣ್ಯ ಇಲಾಖೆಯ ಅಧಿಕಾರಿಗಳು ಪ್ಲ್ಯಾನ್ ಮಾಡಿದ್ದಾರೆ.
ಇದನ್ನು ಓದಿ : ಪ್ರವೀಣ್ ನೆಟ್ಟಾರು ಹತ್ಯೆ, ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೆಸ್ಟ್.