ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮಂಡ್ಯ(Mandya) : ಜನನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiha) ಚುನಾವಣಾ ನಿವೃತ್ತಿ(Election Retired) ಘೋಷಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ(K R Pete) ದಿ. ಕೆ.ಆರ್ ಪೇಟೆ ಕೃಷ್ಣರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಂದು ತಮ್ಮ ಫೇಸ್ ಬುಕ್(Facebook) ಖಾತೆಯಲ್ಲಿ ವಿಷಯ ಹಂಚಿಕೊಂಡ ಸಿದ್ದರಾಮಯ್ಯ(Siddaramaiha), ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದಿದ್ದಾರೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ(Varuna Constancy) ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ(Political) ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ ಎಂದ ಮಂಡ್ಯ(Mandya) ಜಿಲ್ಲೆಯ ಕೆಆರ್ ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ್ದರು.
