ಕಾರವಾರ(KARWAR) : ಮಾಜಿ ವಿಧಾನಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ (ASNOTIKAR) ಅನಾರೋಗ್ಯದಿಂದ ಬುಧವಾರ ಸಾವನ್ನಪ್ಪಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ವರ್ಷಗಳಿಂದ ಶುಭಲತಾ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಚೇತರಿಸಿಕೊಂಡಿದ್ದರು.
ಅವರ ಪತಿ ಮಾಜಿ ಶಾಸಕ ವಸಂತ್ ಆಸ್ನೋಟಿಕರ್ ನಿಧನದ ಬಳಿಕ ಅವರು ಎಂಎಲ್ಸಿ ಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರ ತಾಯಿ.
ಕಾರವಾರದ ಎಂಜಿ ರಸ್ತೆ(MG ROAD ) ಪಕ್ಕದಲ್ಲಿರುವ ಸ್ವಗೃಹದಲ್ಲಿ ಮೃತಪಟ್ಟ ಶುಭಲತಾ ಅವರ ಅಂತಿಮ ದರ್ಶನವನ್ನ ಗಣ್ಯರು ಪಡೆಯುತ್ತಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್(MLA SATISH SAIL), ಮಾಜಿ ಶಾಸಕ ಗಂಗಾಧರ್ ಭಟ್ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ. ನಾಳೆ ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಇದನ್ನು ಓದಿ : ಶಿರೂರಿನಲ್ಲಿ ನಡೆಯದ ಪವಾಡ