ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ(Karwar) : ಕೇವಲ ಬಾಯಿಚಪಲಕ್ಕಾಗಿ ಏನನ್ನೋ ಹೇಳಿ ದೊಡ್ಡವರಾಗಬೇಕೆಂಬ ಕನಸು ಕಂಡರೆ ಅದು ನನಸಾಗುವುದಿಲ್ಲ. ಆರ್‌ಎಸ್‌ಎಸ್ ಹಾಗೂ ಬಿಜೆಪಿ(RSS And BJP) ಬಗ್ಗೆ ಬೇಜವಾಬ್ದಾರಿಯುತವಾಗಿ ಮಾತನಾಡುವುದನ್ನು ಬಿಟ್ಟು, ಜವಾಬ್ದಾರಿಯುತ ಆಡಳಿತ ನಡೆಸುವತ್ತ ಗಮನ ಹರಿಸಿ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆಗೆ(Priyanka Kharge)  ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ(MP Vishweshwara Hegade Kageri) ಸಲಹೆ ನೀಡಿದ್ದಾರೆ.

ಕಾರವಾರದ ಪತ್ರಿಕಾಭವನದಲ್ಲಿ(Patrika Bhavan) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೇರಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

“ನೀವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ(Rural Development Minister) ಏನು ಮಾಡಿದ್ದೀರಿ ಎಂಬುದನ್ನು ಮೊದಲು ಜನರಿಗೆ ತಿಳಿಸಿ. ಹೊಸ ಜವಾಬ್ದಾರಿಯನ್ನು ಹೇಗೆ ನಿಭಾಯಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ” ಎಂದು ಹೇಳಿದರು.

“ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿ(Former PM Indiragandhi). ಆಗಲೂ ಆರ್‌ಎಸ್‌ಎಸ್(RSS), ಜನಸಂಘ(Janasangha) ಹಾಗೂ ಬಿಜೆಪಿಯನ್ನು(BJP) ಯಾರಿಂದಲೂ ಹತ್ತಿಕ್ಕಲು ಸಾಧ್ಯವಾಗಲಿಲ್ಲ”. ಈಗ ನಿಮ್ಮಿಂದ ಆಗುತ್ತಾ ಎಂದು ಪ್ರಶ್ನಿಸಿದರು.

ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಪಕ್ಷದ ಶಕ್ತಿ ನಿರಂತರವಾಗಿ ಬೆಳೆಯುತ್ತಿದೆ. ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು(RSS and BJP) ಹತ್ತಿಕ್ಕಲು ಪ್ರಯತ್ನಿಸಿದವರ ಸ್ಥಿತಿ ಏನಾಗಿದೆ ಎಂಬುದನ್ನು ಪ್ರಿಯಾಂಕ್ ಖರ್ಗೆ ಅರಿತುಕೊಳ್ಳಬೇಕು ಎಂದು ಕಾಗೇರಿ ಹೇಳಿದರು.

ಇದನ್ನು ಓದಿ : ನಾಲ್ಕು ವಾಹನಗಳ ನಡುವೆ ಭೀಕರ ಸರಣಿ ಅಪಘಾತ – ಟಿಪ್ಪರ್ ಚಾಲಕ ಸಾವು. ಏಳು ಮಂದಿಗೆ ಗಾಯ