ನವದೆಹಲಿ(Newdelhi) : ಆರ್ಥಿಕ ಸುಧಾರಣೆಯ ಹರಿಕಾರ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Former Prime Minister Manamohan singh) ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ರಾತ್ರಿ ನಿಧಾನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಇಂದು ಡಿಸೆಂಬರ್ 27 ರಂದು ಸರ್ಕಾರಿ ರಜೆ ಘೋಷಣೆ (Government Holiday Delclared) ಮಾಡಿದ್ದು, ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ (Minister Manamohan singh) ಅವರನ್ನು ನಿನ್ನೆ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.
ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು. 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗುವುದು ಕೇಂದ್ರ ಸರ್ಕಾರ ತಿಳಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಡಾ. ಮನಮೋಹನ್ ಸಿಂಗ್ ಅವರಿಗೆ ಸಂಪೂರ್ಣ ರಾಜ್ಯ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.
ಭಾರತವು ತನ್ನ ಅತ್ಯಂತ ಮೇರು ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡು ದುಃಖಿಸುತ್ತದೆ. ವಿನಮ್ರ ಮೂಲದಿಂದ ಏರಿದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞವರೆಗಿನ ಹಾದಿಯನ್ನು ಏರಿದ್ದರು. ಅವರು ಹಣಕಾಸು ಸಚಿವರಾಗಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ನಮ್ಮ ಆರ್ಥಿಕ ನೀತಿಯ ಮೇಲೆ ಬಲವಾದ ಮುದ್ರೆ ಹಾಕಿದರು. ಸಂಸತ್ತಿನಲ್ಲಿ ಅವರ ಮಧ್ಯಸ್ಥಿಕೆಗಳು ಸಹ ಅದ್ಭುತವಾಗಿದ್ದವು. ನಮ್ಮ ಪ್ರಧಾನಿಯಾಗಿ, ಅವರು ಜನರ ಜೀವನವನ್ನು ಸುಧಾರಿಸಲು ವ್ಯಾಪಕ ಪ್ರಯತ್ನಗಳನ್ನು ಮಾಡಿದ್ದರು.
ಆಧುನಿಕ ಭಾರತದ ಅಭಿವೃದ್ಧಿ ವಿಚಾರದಲ್ಲಿ ಮಹಾನ್ ಕೊಡುಗೆ ನೀಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇನ್ನಿಲ್ಲ ಎಂಬ ಸುದ್ದಿ ಇಡೀ ವಿಶ್ವದಲ್ಲಿ ಸಂಚಲನ ಸೃಷ್ಟಿ ಮಾಡಿದೆ.
ಇದನ್ನು ಓದಿ : ತಾಯಿ ಬುದ್ದಿವಾದ ಹೇಳಿದಕ್ಕೆ ಮಗಳು ಹೀಗೆ ಮಾಡಿಕೊಳ್ಳೋದಾ?