ಬೆಂಗಳೂರು(BANGLORE) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ(STATE GOVERNMENT EMPLOYEES) ಸಂಘ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ “ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ”ಯಲ್ಲಿ ಉತ್ತರಕನ್ನಡ ಜಿಲ್ಲೆಯ ನಾಲ್ವರು ಶಿಕ್ಷಕಿಯರು ಸಾಧನೆ ಮಾಡಿದ್ದಾರೆ.
ಖೋಖೋ ಹಾಗೂ ವಾಲಿಬಾಲ್ ಪಂದ್ಯಾಟದಲ್ಲಿ ತೋರಿದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಉತ್ತರಕನ್ನಡ ಜಿಲ್ಲೆಯ ನಾಲ್ವರು ಶಿಕ್ಷಕಿಯರನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಶಿರಸಿ(SIRSI) ಶೈಕ್ಷಣಿಕ ಜಿಲ್ಲೆಯ ಯಲ್ಲಾಪುರ(YALLAPUR) ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಪುಷ್ಪಾ ಲೀಲಾಧರ ಮೊಗೇರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಗನತಾವರೆಗೆರೆ ಶಾಲೆಯ ಶಿಕ್ಷಕಿ ಶ್ರೀಮತಿ ದೀಪಾ ಶೆಟ್ಟಿ ಮತ್ತು ಉತ್ತರಕನ್ನಡ ಶೈಕ್ಷಣಿಕ ಜಿಲ್ಲೆಯ ಭಟ್ಕಳ(BHATKAL) ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟವಾಣಿಯ ಶಿಕ್ಷಕಿ ಶ್ರೀಮತಿ ಹೇಮಾವತಿ ಕೇಶವ ಮೊಗೇರ ಈ ಮೂವರು ಖೋಖೋ ಆಟದಲ್ಲಿ ತೋರಿದ ಅತ್ಯುತ್ತಮ ಸಾಧನೆಗೆ ರಾಷ್ಟ್ರಮಟ್ಟ(NATIONAL LEVEL) ಖೋಖೋ ತಂಡಕ್ಕೆ ಆಯ್ಕೆಯಾಗಿದ್ದಾರೆ.
ವಾಲಿಬಾಲ್ ಪಂದ್ಯಾಟದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಗನತಾವರೆಗೆರೆ ಶಾಲೆಯ ಶಿಕ್ಷಕಿ ಶ್ರೀಮತಿ ರೇಷ್ಮಾ ನಾಯ್ಕ ಇವರ ಸಾಧನೆಯನ್ನು ಗುರುತಿಸಿ ರಾಷ್ಟ್ರಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆಮಾಡಲಾಗಿದೆ.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಉತ್ತರಕನ್ನಡ ಜಿಲ್ಲೆಗೆ ಕೀರ್ತಿ ತಂದ ನಾಲ್ವರು ಶಿಕ್ಷಕಿಯರ ಸಾಧನೆಯನ್ನು ಜಿಲ್ಲೆಯ ಸಮಸ್ತ ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದೆ. ರಾಷ್ಟ್ರಮಟ್ಟದಲ್ಲೂ ಅತ್ಯುತ್ತಮ ಸಾಧನೆ ಮಾಡಲೆಂದು ಉತ್ತರಕನ್ನಡ ಜಿಲ್ಲೆಯ ಎಲ್ಲಾ ಶಿಕ್ಷಕರು ಆಶಿಸಿದ್ದಾರೆ.