ಗೋಕರ್ಣ(GOKARN) : ತಾರಮಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ(GAANJA) ಮಾರಾಟ ಪ್ರಕರಣದಲ್ಲಿ ಅರೋಪಿತನಾದವನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
2020 ನೇ ಸಾಲಿನಲ್ಲಿ ಅಂದಿನ ಗೋಕರ್ಣ ಪೊಲೀಸ್ ಠಾಣೆಯಲ್ಲಿ(GOKARN POLICE STATION) ಪಿ.ಎಸ್.ಐ ಆಗಿದ್ದ ನವೀನ್ ಎಸ್ ನಾಯ್ಕ ಆರೋಪಿತನ ಮೇಲೆ ದಾಳಿ ಮಾಡಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿದ್ದರು. ಆರೋಪಿತ ಶಂಕರ ತಂದೆ ಕೃಷ್ಣಾ ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಶ್ರೀಮತಿ ತನುಜಾ ಹೊಸಪಟ್ಟಣ ವಾದಿಸಿದ್ದರು. ಗೊಕರ್ಣ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀಮತಿ ಸುಧಾ ಟಿ ಅಘನಾಶಿನಿ ಪ್ರಕರಣದ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದರು. ಆಗಸ್ಟ್ 19 ರಂದು ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25ಸಾ.ರೂ ದಂಡ ಹಾಗೂ ದಂಡವನ್ನು ಕಟ್ಟುವಲ್ಲಿ ವಿಫಲವಾದರೆ ಹೆಚ್ಚುವರಿ 6 ತಿಂಗಳುಗಳ ಕಾಲ ಕಠಿಣ ಶಿಕ್ಷೆಯನ್ನು ವಿಧಿಸಿದೆ.
ಈ ಪ್ರಕರಣದ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಸಂತ ಆಚಾರ್ ರವರು ಕೋರ್ಟ್ ಮೊನಿಟರಿಂಗ್ ಬಗ್ಗೆ ವಿಶೇಷ ಕಾಳಜಿ ವಹಿಸಿ ಆರೋಪಿತನಿಗೆ ಶಿಕ್ಷೆಯಾಗುವಲ್ಲಿ ಪ್ರಮಖ ಪಾತ್ರವನ್ನು ವಹಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ಅಕ್ರಮ ಚಟುವಟಿಕೆ ನಡೆಸುವವರಿಗೆ ಇದು ಪಾಠವಾಗಿದೆ.
ಇದನ್ನು ಓದಿ : ಪ್ರಾಚಾರ್ಯ ವಿರುದ್ಧ ಪ್ರತಿಭಟನೆ