ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ/ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜುಲೈ14ರಿಂದ ಜುಲೈ 16 ವರಗೆ ಗಂಟೆಗೆ 40-50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.

ಹೀಗಾಗಿ ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಸೂಚಿಸಲಾಗಿದೆ. (ಮುಂಗಾರಿನಲ್ಲಿ ಮೀನುಗಾರಿಕೆಯನ್ನು ನಿರ್ಬಂಧಿಸಲಾಗಿರುತ್ತದೆ.) ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು. ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 -08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸಬಹುದೆಂದು  ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ :  ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು,   ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಉತ್ತರ ಒಳನಾಡಿನ ಬೆಳಗಾವಿ, ಗದಗ, ಬಾಗಲಕೋಟೆ, ಹಾವೇರಿ, ಧಾರವಾಡ, ಬೀದರ, ವಿಜಯಪುರ, ಕಲಬುರಗಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜುಲೈ 14 ರಂದು  ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ : ಸಾಲ ತೀರಿಸಲು ಮಗುವನ್ನೆ  ಮಾರಾಟ ಮಾಡಿದ ದಂಪತಿ