ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ(Karwar) : ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (Holiday Declare) ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜೂನ್ 17 ರವರೆಗೆ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ (Red Alert) ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ನಾಳೆ ಜೂನ್ 13ರಂದು ರಜೆ ಘೋಷಿಸಿದೆ.
ರೆಡ್ ಅಲರ್ಟ್(Red Alert) ಸಮಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 13 ರಂದು ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಭಟ್ಕಳದ ಈ ಮಾರ್ಗದಲ್ಲಿ ಸಂಚಾರ ನಿಷೇಧ – ಪರ್ಯಾಯ ಮಾರ್ಗ ಅನುಸರಿಸಿ : ಜಿಲ್ಲಾಧಿಕಾರಿ
ಸಿದ್ದಾಪುರ, ಶಿವಮೊಗ್ಗ ಗಡಿಯಲ್ಲಿ ಲವ್ ದೋಖಾ ಜಾಲ. ಬಯಲಿಗೆಳೆದ ಯುವಕ ಆತ್ಮತ್ಯೆ. ಹಲವರ ಬಂಧನ.*