ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar) :  ಕರಾವಳಿ ಜಿಲ್ಲೆಗಳಲ್ಲಿ(Coastal district) ವ್ಯಾಪಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳ   ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ.

ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇದು ಜಿಲ್ಲಾಧಿಕಾರಿ  ರಜೆ (Holiday) ಘೋಷಿಸಿದ್ದಾರೆ.

ಅದೇ ರೀತಿ ಉಡುಪಿ() Udupi ಮತ್ತು ದಕ್ಷಿಣಕನ್ನಡ(Dakshinakannada) ಜಿಲ್ಲೆಯ ಶಾಲೆಗಳಿಗೂ ರಜೆ ನೀಡಲಾಗಿದೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮತ್ತು  ಯಾವುದೇ ಅನಾನುಕೂಲ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. ಈ  ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಭಟ್ಕಳದಲ್ಲಿ ಜುಲೈ 18ರಿಂದ  20 ರವರೆಗೆ  ಹಲಸು ಮತ್ತು ಹಣ್ಣಿನ ಮೇಳ.

ಲಂಚ..ಲಂಚ..ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಸದಸ್ಯ, ಅಧಿಕಾರಿ