ಕಾರವಾರ : ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಜುಲೈ 22ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.
ರೆಡ್ ಅಲರ್ಟ್ ಇರುವುದರಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗೃತೆಯಿಂದ ರಜೆ ನೀಡಲಾಗಿದೆ.