ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಗೇರುಸೊಪ್ಪ ಜಲಾಶಯದ(Gerusoppa Dam) ನೀರು ಹೊರಬಿಟ್ಟಿರುವುದರಿಂದ, ಮಕ್ಕಳ ಸುರಕ್ಷತೆ ಗಮನಿಸಿ ಹೊನ್ನಾವರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳಿಗೆ ಅಗಸ್ಟ್ 30ರಂದು ರಜೆ(Holiday) ಘೋಷಿಸಿ ತಹಶೀಲ್ದಾರ ಆದೇಶಿಸಿದ್ದಾರೆ.
ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅವರ ಮೌಖಿಕ ಕೋರಿಕೆಯಂತೆ ಮತ್ತು ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಹೊನ್ನಾವರ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇದನ್ನು ಓದಿ : ಪೋಲೀಸ್ ಜೀಪಿಗೆ ದಂಡ ವಿಧಿಸಿದ ಪೋಲೀಸರು!