ಕಾರವಾರ KARWAR : ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ಜುಲೈ 8 ರಂದು ಶಾಲಾ ಕಾಲೇಜುಗಳಿಗೆ ರಜೆ (HOLIDAY) ನೀಡಲಾಗಿದೆ.
ಕರಾವಳಿ ತಾಲೂಕುಗಳಾದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (SCHOOLS AND PU COLLEGES) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ (DC LAKSHMIPRIYA) ತಿಳಿಸಿದ್ದಾರೆ.