ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ(Honnavar) ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್(Gerusoppa-sulemurki Cross) ಸಮೀಪ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡ ದುರ್ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅತೀವ ವೇಗದಲ್ಲಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಹೆಚ್ಚಾಗಿದೆ. ಅಪಘಾತದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಇಬ್ಬರು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅವರ ಗುರುತು ಪತ್ತೆಯಾಗದಷ್ಟು ಗಂಭೀರ ಸ್ಥಿತಿ ನಿರ್ಮಾಣವಾಗಿದೆ.
ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಸಹ ಸಂಪೂರ್ಣವಾಗಿ ಭಸ್ಮವಾಗಿದ್ದು, ವಾಹನ ಹಾಗೂ ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು(Honnavar) ಹಾಗೂ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ, ವಾಹನದ ವಿವರ ಹಾಗೂ ಮೃತರ ಗುರುತು ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ಇದನ್ನು ಓದಿ : ಪ್ರೀತಿಸಿದ ಯುವತಿ ಮದುವೆಯಾಗಲು ಒಪ್ಪಲಿಲ್ಲ. ಉಸಿರು ಕಳೆದುಕೊಂಡ ಯುವಕ.
ಗೋವಾ ನೈಟ್ ಕ್ಲಬ್ ದುರಂತ. ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ.
ರಾಜ್ಯದಲ್ಲಿ ಸಿಎಂ ಆಗಿ ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
