ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಖಾಸಗಿಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹೊನ್ನಾವರ (Honnavar) ತಾಲೂಕಿನ ಅಳ್ಳಂಕಿ ಸಮೀಪ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 69ರಲ್ಲಿ(NH 69) ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಬಸ್ ಭಟ್ಕಳ ಕಡೆಯಿಂದ ಬೆಂಗಳೂರಿಗೆ(Bhatkal to Bangalore) ತೆರಳುತ್ತಿತ್ತು. ಅಪಘಾತದಲ್ಲಿ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನತ್ತ ತೆರಳುತ್ತಿದ್ದ ಶ್ರೀಕುಮಾರ್ ಟ್ರಾವೆಲ್ಸ್(Shreekumar Travels) ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು ಒಟ್ಟು ಸುಮಾರು 23 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಗೇರುಸೊಪ್ಪ(Gerusoppa) ಸಮೀಪದ ಅಳ್ಳಂಕಿ ಕ್ರಾಸ್(Allanki Cross) ಬಳಿಯ ತಿರುವಿನಲ್ಲಿ ಸ್ಕೂಟಿಯೊಂದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ(Honnavar Government Hospital) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗುಂಡಬಾಳ ನಿವಾಸಿಗಳಾದ ಸುರೇಶ ಗೌಡ, ಆಶಾ ಸುರೇಶ ಗೌಡ ಹಾಗೂ ಎರಡು ವರ್ಷದ ಮಗು ತೀವ್ರವಾಗಿ ಗಾಯಗೊಂಡಿದ್ದು, ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯ ನಾಗರಿಕರು ಸ್ಥಳಕ್ಕೆ ಧಾವಿಸಿ ಬಸ್ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದರು. ಅಲ್ಲದೇ ಆಸ್ಪತ್ರೆಗೆ ಸೇರಿಸಲು ಸಹಕರಿಸಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು, ಆಗಮಿಸಿ ವಾಹನವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ(Honnavar Police Station) ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ : ಹಿಂದುಗಳೇ ಎಚ್ಚೆತ್ತುಕೊಳ್ಳಿ. ಒಂದಾಗಿ ಎದ್ದು ನಿಲ್ಲಿ : ಅನಂತಕುಮಾರ ಹೆಗಡೆ ಕರೆ.
ಮುರ್ಡೇಶ್ವರ ಮೂಲದ ಶ್ರೇಯನ್ಸ್ ಯುಪಿಎಸ್ಸಿ ಯಲ್ಲಿ 169 ನೇ ರ್ಯಾಂಕ್.
ಶಾಲೆಯಲ್ಲಿ ಮಲಗಿ ಶಿಕ್ಷಕಿಯ ದುರ್ನಡತೆ. ಮಕ್ಕಳಿಂದ ಬೆನ್ನು ತುಳಿಸಿಕೊಂಡು ಇರಿಸುಮುರಿಸು.
