ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಚಿತ್ರದುರ್ಗ(Chitradurga) : ಚಳ್ಳಕೆರೆ ತಾಲೂಕಿನ(Challakeri Taluku) ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು (RSI) ಸ್ಥಳದಲ್ಲೇ ದುರ್ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಬೆಂಗಳೂರಿನಿಂದ ಬಳ್ಳಾರಿ(Bangalore to Ballari) ಕಡೆಗೆ ತೆರಳುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಎಂದು ಗುರುತಿಸಲಾಗಿದೆ. ಇವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳಾಗಿದ್ದರು. ಅಪಘಾತದಲ್ಲಿ PSI ಈಶ್ವರ್ ಹಾಗೂ RSI ಮಹಾಂತೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಗ್ಗೆರೆ ಗ್ರಾಮದ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಬಳಿ ಘಟನೆ ನಡೆದಿದ್ದು, ಈ ಮಾರ್ಗದಲ್ಲಿ ಪ್ರತಿದಿನವೂ ನೂರಾರು ಲಾರಿಗಳ ಸಂಚಾರ ಇರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ(Chitradurga SP) ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ತಾಲೂಕಿನ ಐಮಂಗಲ ಪೊಲೀಸ್ ಠಾಣೆ(Aimangala Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಭೀಕರ ಅಪಘಾತದಿಂದ ಪೊಲೀಸ್ ಇಲಾಖೆಯಲ್ಲಿಯೂ ಹಾಗೂ ಜಿಲ್ಲೆಯಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನು ಓದಿ : ಹೊನ್ನಾವರದ ಹಾಡಗೇರಿಯಲ್ಲಿ ಘಟನೆ. ಏರಗನ್ ಗುಂಡು ಸಿಡಿದು ಯುವಕ ಮೃತ್ಯು.
