ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಮಟಾ (Kumta) : ತಾಲೂಕಿನ ಬರ್ಗಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕುಮಟಾ ಕಡೆಯಿಂದ ಅಂಕೋಲಾ ಕಾಲೇಜಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಐಟಿಐ ವಿದ್ಯಾರ್ಥಿಗಳಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕುಮಟಾ ತಾಲೂಕಿನ ಹೆಗಡೆ ಗ್ರಾಮದ ನಿವಾಸಿ
ಚಿನ್ಮಯ ಪಟಗಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಲಕ್ ಗೌಡ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಘಟನೆ ಬಳಿಕ ವಾಹನ ಚಾಲಕ ಪರಾರಿಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
