ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕುಮಟಾ(Kumta) :  ಊಟ ಮಾಡಲು ಹೊಟೇಲ್ ಒಳಗೆ ಬರುತ್ತಿದ್ದ   ಅಲೆಮಾರಿ ದಂಪತಿಯನ್ನ(Nomad Couple) ಒಳಗೆ ಪ್ರವೇಶಿಸಲು ನಿರಾಕರಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ  ಪಟ್ಟಣದ ಹೊಸ ಬಸ್ ನಿಲ್ದಾಣದ(New Busstand) ಸಮೀಪ ನಡೆದಿದೆ.

ಘಟನೆಯಲ್ಲಿ ಅಲೆಮಾರಿ ಭಿಕ್ಷುಕ(Nomad Beggers) ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಗರ ತಾಲೂಕಿನ ಆಲಮಟ್ಟಿ ಗ್ರಾಮದ(Sagar Taluku Alamatti Village) ದಂಪತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತು ಮನೆ ಹಾಗೂ ಅಂಗಡಿಗಳಿಗೆ ತೆರಳಿ ಭಿಕ್ಷಾಟನೆ ಮಾಡುತ್ತಿದ್ದರು. ಹಸಿವಿನಿಂದ ಬಳಲುತ್ತಿದ್ದ ದಂಪತಿ, ಹಣ ನೀಡಿ ಊಟ ಮಾಡಲು ಕುಮಟಾದ ಗೋವರ್ಧನ ಹೋಟೆಲ್‌ಗೆ(Kumta Govardhan Hotel) ತೆರಳಿದ್ದರು. ಆದರೆ ಅವರ ಬಟ್ಟೆ ನೋಡಿ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡದೆ, ಹೊರಕ್ಕೆ ತಳ್ಳಲಾಗಿದೆ ಎನ್ನಲಾಗಿದೆ.

ಹೋಟೆಲ್ ಮಾಲೀಕ ಗಣೇಶ ನಾಯ್ಕ ಹಾಗೂ ಸೆಕ್ಯೂರಿಟಿ ಗಾರ್ಡ್ ಭಿಕ್ಷುಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಭಿಕ್ಷುಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕಂಡ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಮಟಾ ಪೊಲೀಸ್ ಠಾಣೆಯ(Kumta Police Station) ಪಿಎಸ್ಐ ಖಾದರ್ ಭಾಷಾ ಹಾಗೂ ರವಿ ಗುಡೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಗಣೇಶ ನಾಯ್ಕ ಹಾಗೂ ಸೆಕ್ಯೂರಿಟಿ ಗಾರ್ಡ್ ಮೇಲೆ ಪ್ರಕರಣ ದಾಖಲಾಗಿದೆ. "ಭಿಕ್ಷುಕ ಏನಾದ್ರು ತಪ್ಪು ಮಾಡಿದ್ದರೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು. ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಅಮಾನವೀಯ ಕೃತ್ಯ" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ :  ‘ಕುಮಟಾ ಟು ಜಪಾನ್’. ಪ್ರತಿಭಾನ್ವಿತ ವಿದ್ಯಾರ್ಥಿಯ ಟ್ಯಾಲೆಂಟ್ ಜರ್ನಿ.*