ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news): ಭಟ್ಕಳ(Bhatkal) : ಅಕ್ರಮವಾಗಿ ಜಾನುವಾರು(Cattle) ಸಾಗಿಸುತ್ತಿದ್ದ ವೇಳೆ  ಜೀಪು ಕಂಡ ಕ್ಷಣ ಆರೋಪಿತರು  ಕಾರು ಬಿಟ್ಟು ಪರಾರಿಯಾದ ಘಟನೆ ಭಟ್ಕಳ  ತಾಲೂಕಿನ ಹಾಡುವಳ್ಳಿ ಗ್ರಾಮದ(Bhatkal Haduvalli Village) ಹಲ್ಯಾಣಿ ಬಳಿ ನಡೆದಿದೆ.

ಆರೋಪಿತರು ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ(Maruti Suzuki Baleno Car) ಸುಮಾರು 1.03 ಲಕ್ಷ ಮೌಲ್ಯದ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ   ಸಾಗಿಸುತ್ತಿದ್ದರು.  ನೀರು ಹಾಗೂ ಹುಲ್ಲು ನೀಡದೆ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ, ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ ಪೆಟ್ರೋಲಿಂಗ್‌ ನಡೆಸುತ್ತಿದ್ದ ಅರಣ್ಯ ಇಲಾಖೆ(Forest Department) ವಾಹನವನ್ನು ಕಂಡ ಆರೋಪಿತರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ವಾಹನವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ  ಅಕ್ರಮವಾಗಿ ಸಾಗಿಸುತ್ತಿರುವುದು ಗೊತ್ತಾಗಿದೆ. ಈ ಸಂಬಂಧ ಆರೋಪಿತರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆ(Bhatkal Rural Station) ಪಿಎಸೈ ಮಲ್ಲಿಕಾರ್ಜುನಯ್ಯ ಕೊರಾಣಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.