ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರಕನ್ನಡ(Uttarakannada) ಜಿಲ್ಲೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ಉಷ್ಣ ಅಲೆಯ(Heat Waves) ವಾತಾವರಣ ಉಂಟಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ.
ಸಾರ್ವಜನಿಕರು ಈ ಸಂದರ್ಭದಲ್ಲಿ ಎಚ್ಚರವಹಿಸುವಂತೆ (Alert ) ತಿಳಿಸಲಾಗಿದೆ. ನಾಗರಿಕರು ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು, ದಾಹವಾಗದಿದ್ದರೂ ನೀರನ್ನು ಸೇವಿಸಬೇಕು, ಓ.ಆರ್.ಎಸ್, ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು ಮುಂತಾದ ದ್ರವಗಳನ್ನು ಸೇವಿಸಬೇಕು, ಹಗುರವಾದ, ತೆಳುವಾದ ಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು, ತಲೆ ಮತ್ತು ಮುಖವನ್ನು ಟೋಪಿ, ಛತ್ರಿ, ಗಮಚಾ ಅಥವಾ ರುಮಾಲಿನಿಂದ ಮುಚ್ಚಿಕೊಳ್ಳಬೇಕು, ಸಾಧ್ಯವಾದಷ್ಟು ತೀವ್ರ ಬಿಸಿಲಿನ ಸಮಯದಲ್ಲಿ (ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ) ಹೊರಗೆ ಹೋಗುವುದನ್ನು ತಪ್ಪಿಸಬೇಕು, ಹೊರಗೆ ಕೆಲಸ ಮಾಡುವಾಗ ನೆರಳಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಬೇಕು, ಮಕ್ಕಳು, ವೃದ್ಧರು, ಗರ್ಭಿಣಿಯರು ಮತ್ತು ಅಸ್ವಸ್ಥರಿಗೆ ವಿಶೇಷ ಕಾಳಜಿ ವಹಿಸಬೇಕು. ದೇಹದಲ್ಲಿ ತಲೆಸುತ್ತು, ಅತಿಯಾದ ದೌರ್ಬಲ್ಯ, ವಾಂತಿ, ಜ್ವರದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು, ಮನೆ ಮತ್ತು ಕೆಲಸದ ಸ್ಥಳಗಳಲ್ಲಿ ಗಾಳಿ ಹರಿವಿಗೆ ಅವಕಾಶ ಕಲ್ಪಿಸಬೇಕೆಂದು ತಿಳಿಸಲಾಗಿದೆ.
ಇನ್ನೂ ಉಷ್ಣ ಅಲೆ ಸಂದರ್ಭದಲ್ಲಿ ಇವುಗಳನ್ನ ಮಾಡಬಾರದಾಗಿ (DON’TS) ಸೂಚಿಸಲಾಗಿದೆ. ತೀವ್ರ ಬಿಸಿಲಿನ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗಬಾರದು. ಮದ್ಯಪಾನ, ಹೆಚ್ಚು ಕಾಫಿ ಅಥವಾ ಸಿಹಿ ಪಾನೀಯಗಳನ್ನು ಸೇವಿಸಬಾರದು, ಕಠಿಣ ಶಾರೀರಿಕ ಕೆಲಸಗಳನ್ನು ಬಿಸಿಲಿನ ಸಮಯದಲ್ಲಿ ಮಾಡಬಾರದು, ಮಕ್ಕಳನ್ನು ಅಥವಾ ಪ್ರಾಣಿಗಳನ್ನು ಮುಚ್ಚಿದ ವಾಹನಗಳಲ್ಲಿ ಬಿಟ್ಟು ಹೋಗಬಾರದು, ಅತಿಯಾದ ಮಸಾಲೆ ಮತ್ತು ಎಣ್ಣೆ ಪದಾರ್ಥಗಳನ್ನು ಸೇವಿಸಬಾರದು. ಉಷ್ಣಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ತಲೆ ಮುಚ್ಚಿಕೊಳ್ಳದೇ ಬಿಸಿಲಿಗೆ ನೇರವಾಗಿ ಒಡ್ಡಿಕೊಳ್ಳಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಕುಮಟಾ ಪೊಲೀಸರ ಕಾರ್ಯಾಚರಣೆ. ಪೆಟ್ರೋಲ್ ಬಂಕ್ ಕಳ್ಳತನ ಪ್ರಕರಣದಲ್ಲಿ ಬಾಗಿಯಾದ ಇಬ್ಬರ ಬಂಧನ.
