ಭಟ್ಕಳ : ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆದ್ದು ಕಿರೀಟ ಮುಡಿಗೇರಿಸಿಕೊಂಡ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಭಟ್ಕಳದಲ್ಲಿ ಕ್ರಿಕೆಟಾಭಿಮಾನಿಗಳು ರಾ. ಹೆದ್ದಾರಿ 66 ಸಂಶುದ್ದಿನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಕೆಲವು ತಾಸಿನವರೆಗೆ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿದ್ದರಿಂದ ಪೊಲೀಸರು ಕೂಡ ಹರಸಾಹಸ ಪಡಬೇಕಾಯಿತು.
17 ವರ್ಷಗಳ ಬಳಿಕ ಟಿ20 ಗೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ ಟಿ 20 ವಿಶ್ವ ಕಪ್ ಗೆಲ್ಲುವ ಮೂಲಕ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದು ರಾಷ್ಟ್ರಕ್ಕೆ ಅಪಾರ ಕೀರ್ತಿ ತಂದಿದ್ದಾರೆ. 2014 ರಲ್ಲಿ ತಪ್ಪಿದ್ದ ಟ್ರೋಫಿ ಈ ಬಾರಿ 2024 ರಲ್ಲಿ ನಮ್ಮದಾಗಿದೆ. ಎಲ್ಲೆಡೆ ಅಭಿಮಾನಿಗಳಿಂದ ಭಾರತ ತಂಡಕ್ಕೆ ಅಭಿನಂದನೆಗಳ ಸುರಿಮಳೆಗೈಯುತ್ತಿದ್ದಾರೆ.