ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar): ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯವಾಗಿರೋದನ್ನ ಖಂಡಿಸಿ ಕಾರವಾರದಲ್ಲಿ ನಗರಸಭೆ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ನಗರಸಭೆ ಸಮೀಪ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟಿಸಿದ ನೌಕರರು ಬಜೆಟ್ ನಲ್ಲಿ ಅನ್ಯಾಯ ಆಗಿರೋದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರಕಾರ ಮಂಡಿಸಿದ ಬಜೆಟ್ ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೆ ರಾಜ್ಯ ಸರಕಾರ ಅನ್ಯಾಯ ಎಸಗಿದೆ.

ರಾಜ್ಯ ಕಾಂಗ್ರೆಸ್ ಸರಕಾರ ಕಳೆದ ಚುನಾವಣಾ ಕಾಲಕ್ಕೆ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಆರನೇ ಗ್ಯಾರಂಟಿ ನೀಡಿತ್ತು. ಆದರೆ  ಪೌರಕಾರ್ಮಿಕರಲ್ಲಿ ತಾರತಮ್ಯ ಎಸಗಿರುವ ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ಚಾಲಕರು, ನೀರು  ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ನೌಕರರಿಗೆ ಗುತ್ತಿಗೆ ಪದ್ದತಿಯನ್ನು ಹೇರಿದೆ.

ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ  ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರು. ಗುತ್ತಿಗೆ  ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ.

ರಾಜ್ಯ ಸರಕಾರ ಎಚ್ಚೆತ್ತು ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು. ತಪ್ಪಿದ್ದಲ್ಲಿ  ರಾಜ್ಯಾದ್ಯಂತ ಕುಡಿಯುವ ನೀರು ಸ್ವಚ್ಚತೆ ಬಹಿಷ್ಕರಿಸಿ ಅನಿರ್ದಿಷ್ಠಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಈ ಮೂಲಕ ಎಚ್ಚರಿಸುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇದನ್ನು ಓದಿ : ರಾಜ್ಯ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗೆ ಏನೇನು ?

ಮಾರ್ಚ್  9 ರಂದು ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ.

ಜಿಲ್ಲಾಧಿಕಾರಿ ಆಗಬೇಕೆಂದ ವಿದ್ಯಾರ್ಥಿನಿಯನ್ನು  ಕುರ್ಚಿಯಲ್ಲಿ ಕೂರಿಸಿದ ಜಿಲ್ಲಾಧಿಕಾರಿ.