ಬೆಂಗಳೂರು(BANGLORE): ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಜಾರಿಯಲ್ಲಿರುವ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು(Shakti Scheme) ಸ್ಥಗಿತಗೊಳಿಸುವ ಬಗ್ಗೆ ಸರ್ಕಾರ(Government) ಚಿಂತನೆ ನಡೆಸಿದೆಯಾ. ಹೀಗೊಂದು ಚರ್ಚೆ ರಾಜ್ಯದಲ್ಲಿ ನಡೆಯುತ್ತಿದೆ.
ಅನೇಕ ಮಹಿಳೆಯರು ಶಕ್ತಿ ಯೋಜನೆಯ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್(D K Shivakumar) ಹೇಳಿರುವುದು ಚರ್ಚೆಗೆ ಕಾರಣವಾಗಿದೆ. “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ. 5ರಿಂದ 10ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ” ಎಂದು ಡಿಕೆಶಿ(Dikeshi) ಹೇಳಿದ್ದರು.
ಯಾರೋ ಅಪರೂಪಕ್ಕೆ ಬಸ್ಸುಗಳಲ್ಲಿ ಓಡಾಡುವ ಮಹಿಳೆಯರು, ಕಾರಿನಲ್ಲಿ ಓಡಾಡುವ ಮಹಿಳೆಯರು ಶಕ್ತಿ ಯೋಜನೆ ಬೇಡ ಎಂದು ಹೇಳುತ್ತಿರಬಹುದು. ಆದರೆ, ಲಕ್ಷಾಂತರ ಮಹಿಳೆಯರಿಗೆ ಇದರಿಂದ ಅನುಕೂಲವಾಗಿದೆ. ಈ ಯೋಜನೆಯು ಬಡ ಹಾಗೂ ನಿರ್ಗತಿಕ ಮಹಿಳೆಯರಿಗೆ ಅನುಕೂಲವಾಗಿದೆ. ಆದ್ದರಿಂದ ಈ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Transport Minister Ramalinga reddy)ತಿಳಿಸಿದ್ದಾರೆ.
ಶಕ್ತಿ ಯೋಜನೆ ಮರುಪರಿಶೀಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ(Central Minister H D Kumraswamy) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿಕೆಶಿಯವರ ಕನಸಿನಲ್ಲಿ ಯಾವ ಮಹಿಳೆಯರು ಬಂದು ಯೋಜನೆ ಸ್ಥಗಿತಗೊಳಿಸಿ ಎಂದು ಹೇಳಿದ್ದಾರಾ’’ ಎಂದು ಅವರು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. “ಅದೆಲ್ಲವೂ ಕೇವಲ ನೆಪ ಮಾತ್ರ. ಅಧಿಕಾರಕ್ಕೆ ಬಂದ ಹೊಸತರದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ್ದ ಐದು ಗ್ಯಾರಂಟಿಗಳನ್ನು(Guarantees) ಒಂದೊಂದಾಗಿ ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ. ಅದನ್ನು ಸಾಧಿಸಲು ಇಂಥ ನೆಪಗಳನ್ನು ಹುಡುಕಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇದನ್ನು ಓದಿ : ದೀಪಾವಳಿ ಸಂಭ್ರಮ. ವಾಹನಗಳಿಗೆ ಪೂಜೆ