ಕಾರವಾರ(KARWAR) : ಭ್ರಷ್ಟಾಚಾರ(CORRUPTION), ದುರ್ನಡತೆ ಮತ್ತು ಸುಲಿಗೆ ಮುಂತಾದ ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ(KARNATAKA LOKAYUKTA) ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಜನತಾ ದಳದ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ಕೈಗೊಂಡು ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರಿಯಾಗಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಕ್ತ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಶಿಫಾರಸ್ಸಿನೊಂದಿಗೆ ಸಲ್ಲಿಸಲು ಜೆಡಿಎಸ್ (JDS) ಮನವಿಯಲ್ಲಿ ಒತ್ತಾಯ ಮಾಡಿದೆ.
ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆಯಾಗಬೇಕು. ಭ್ರಷ್ಟ ಅಧಿಕಾರಿಯ ಕಾರ್ಯವೈಖರಿಯನ್ನು ಜೆಡಿಎಸ್ ಖಂಡಿಸುತ್ತದೆ. ಮಾಜಿ ಸಿಎಂ ಮತ್ತು ಹಾಲಿ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತಾಡಿರುವ ಚಂದ್ರಶೇಖರ್ ನಡತೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡರು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕೋರ್ ಕಮಿಟಿ ಸದಸ್ಯ ಸೂರಜ್ ನಾಯ್ಕ ಸೋನಿ, ಉಪೇಂದ್ರ ಪೈ, ಮೋಹಿನಿ ನಾಯ್ಕ, ನಾಗಪತಿ ಗೌಡ, ಸಂದೀಪ ಬಂಟ ಹಾಗೂ ಇನ್ನಿತರರು ಇದ್ದರು.
ಇದನ್ನು ಓದಿ : ಅಗಲಿದ ನಾಯಕರಿಗೆ ಕಾರವಾರದಲ್ಲಿ ಶ್ರದ್ದಾಂಜಲಿ