ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ /ಉಡುಪಿ(Karwar/Udupi) : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ  ಬಿಸಿಲ ಧಗೆ ಹೆಚ್ಚಾಗುತ್ತಿದೆ. ಪರಿಣಾಮವಾಗಿ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಹೀಗಾಗಿ  ಹವಾಮಾನ ಇಲಾಖೆ ಕರಾವಳಿ(Karavali) ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್(Yellow alert) ಘೋಷಣೆ ಮಾಡಿದೆ.

ಉತ್ತರಕನ್ನಡ(Uttarakannada), ದಕ್ಷಿಣಕನ್ನಡ(Dakshinakannada), ಉಡುಪಿ(Udupi) ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಅತಿಹೆಚ್ಚು ಉಷ್ಣಾಂಶ(Temperature) ದಾಖಲಾಗುತ್ತಿದೆ. ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಲ್ ಗರಿಷ್ಠ ಉಷ್ಣಾಂಶ ದಾಖಲಾದರೆ, ಚಾಮರಾಜನಗರ ಜಿಲ್ಲೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಮುಂಜಾಗೃತೆಯಾಗಿ ಜನತೆ ತಮ್ಮ ಆರೋಗ್ಯ ಕಾಪಾಡಿಕೊಳುವಂತೆ ಹವಾಮಾನ ಇಲಾಖೆ  ಸಲಹೆ-ಸೂಚನೆಗಳನ್ನು ನೀಡಿದೆ.

ಸಾರ್ವಜನಿಕರು  ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ಹಾಗೂ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಪಾದರಕ್ಷೆ  ಬಳಸಬೇಕು.

ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಬಳಸಬಾರದು. ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬಾರದು. ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು.

ಓ ಆರ್ ಎಸ್ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಕ್ಷ್ಮಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಬೇಕು. ಇದು ದೇಹವನ್ನು ಮರು- ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಬೇಕು ಹಾಗೂ ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಮನೆಯನ್ನು ತಂಪಾಗಿ ಇರಿಸಬೇಕು, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆದಿಡಬೇಕು. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಬೇಕು ಮತ್ತು ತಣ್ಣೀರಿನಲ್ಲಿ ಸ್ನಾನ ಮಾಡಬೇಕು.

ವ್ಯಕ್ತಿಯು ಸನ್‌ಸ್ಟ್ರೋಕ್‌ಗೆ ಒಳಗಾಗಿದ್ದಲ್ಲಿ ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ ನೆರಳಿನ ಕೆಳಗೆ ಇರಿಸಿ, ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಬೇಕು. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಬೇಕು. ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಲು ಗಮನ ಹರಿಸಬೇಕು.

ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ಪ್ರಯಾಣಿಕರು ಪ್ರಯಾಣಿಸುವಾಗ ನೀರನ್ನು ಜೊತೆಗೆ ಕೊಂಡೊಯ್ಯಬೇಕು.

ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು ಆದರೆ ದುರ್ಬಲ ಜನರಿಗೆ ಮಧ್ಯಮ ಆರೋಗ್ಯ ಕಾಳಜಿ ಉದಾ. ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವ ಜನರು. ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡಬಾರದು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು, ಟೋಪಿ ಅಥವಾ ಕೊಡ/ಛತ್ರಿ ಬಳಸಬೇಕು.
ಒಂದು ವೇಳೆ ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತಿ ತಂಪಾದ ನೀರು ಕುಡಿಯಬಾರದು ಅಥವಾ ಎಸಿ/ ಕೂಲರ್‌ಗಳನ್ನು ಕೂಡಲೇ ಬಳಸುವುದು ಸೂಕ್ತವಲ್ಲ.

ಬಿಸಿಗಾಳಿ ಸಂದರ್ಭಗಳಲ್ಲಿ ಸಮುದಾಯ ಮಟ್ಟದಲ್ಲಿ ಅನುಸರಿಸಬೇಕಾದ ಕ್ರಮಗಳು: ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಇರಬೇಕು. ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಬೇಕು. ಸಾಧ್ಯವಾದಷ್ಟು ಹತ್ತಿಯ ಉಡುಪುಗಳನ್ನು ಹಾಗೂ ಹತ್ತಿಯ ಟೋಪಿಗಳನ್ನು ಧರಿಸಬೇಕು. ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಬೇಕು. ಸಾಕಷ್ಟು ನೀರು, ಮಜ್ಜಿಗೆ ಕುಡಿಯಬೇಕು. ವಾಸವಿರುವ ಕೋಣೆಯನ್ನು ತಂಪಾಗಿರಿಸಬೇಕು. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಬೇಕು. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ನೀಡಬೇಕು. ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವಹಾರ ನೀಡಬೇಕು.

ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬಾರದು. ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬಾರದು. ಕಪ್ಪು /ಘಾಡ ಬಣ್ಣದ ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬಾರದು. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬಾರದು. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬಾರದು. ಬಿಸಿ ಚಹ, ಮದ್ಯ ಸೇವಿಸಬಾರದು. ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಬೇಕು. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬಾರದು. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬಾರದು. ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೀನು ಸೇವಿಸಬಾರದು.

ತುರ್ತು ಸೇವೆಗಾಗಿ ಶುಲ್ಕ ರಹಿತ 1077 ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಕೇಣಿ ಗ್ರಾಮದಲ್ಲಿ ನಿಷೇದಾಜ್ಞೆ  ವಿಸ್ತರಣೆಗೊಳಿಸಿದ ಜಿಲ್ಲಾಡಳಿತ.

ರಂಜನ್ ಇಂಡಿಯನ್ ಗ್ಯಾಸ್ ಏಜೆನ್ಸಿ ವತಿಯಿಂದ ಯಶಸ್ವಿಯಾದ ಪಾದಯಾತ್ರೆ.

ಮೀನುಗಾರರ ಮೇಲಾಗುತ್ತಿರುವ ದೌರ್ಜನ್ಯ ನಿಲ್ಲಲಿ. ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಹೇಳಿಕೆ.