ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ತಾವೂ ಎಂಪಿಯಾಗಿ ತಮ್ಮ ಮಕ್ಕಳನ್ನ ಎಂಎಲ್ಎ ಮಾಡಬೇಕೆಂದು ಕನಸು ಕಂಡಿದ್ದ ಇಬ್ಬರು ಮಾಜಿ ಸಿಎಂ ಗಳ ಆಸೆ ನುಚ್ಚು ನೂರಾಗಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್  ಗೆಲುವು ಸಾಧಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಜಿ ಎಂ, ಹಾಲಿ ಎಂಪಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ದ  ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ ವಿಜಯ ಸಾಧಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್  ಭಾರಿ ಅಂತರಗಳಿಂದ ಗೆಲುವು ಸಾಧಿಸಿದ್ದಾರೆ. ಮಾಜಿ ಸಿಎಂ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಸುಳಿವಿನಲ್ಲಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೆ ಮೇಲಿಂದ ಮೇಲೆ ಅಘಾತ :
2019ರ ಮಂಡ್ಯ ಲೋಕಸಭಾ ಚುನಾವಣೆ ಮತ್ತು 2023 ರ ರಾಮನಗರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಈಗ ಮತ್ತೆ ಪರಭಾವಗೊಂಡಿದ್ದು,  ಜೀವನದಲ್ಲಿ ದೊಡ್ಡ ಪಾಠ ಕಲಿಯುವಂತಾಗಿದೆ.

ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎರ್ಪಟ್ಟಿತ್ತು.

ನಿಜವಾಯ್ತು ಡಿಕೆ ಭವಿಷ್ಯ : ನಿನ್ನೆ ಮುರ್ಡೇಶ್ವರಕ್ಕೆ ಬಂದಿದ್ದ ಡಿಸಿಎಂ ಡಿ ಕೆ ಶಿವಕುಮಾರ್ ಉಪ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ ಗಳ ಲೆಕ್ಕಾಚಾರ ಉಲ್ಟಾ ಆಗಲಿದೆ. ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದರು. ಇದೀಗ ಶಿವಕುಮಾರ್ ಅವರ ಮಾತು ನಿಜವಾಗಿದೆ.

ಇದನ್ನು ಓದಿ : ಅಳ್ವೆಕೋಡಿ ಮೀನುಗಾರರ ಸಂಘಕ್ಕೆ ಪ್ರಶಸ್ತಿ

ನೇತ್ರಾಣಿಗೆ ಜಾಲಿ ಟ್ರಿಪ್ ಮಾಡಿದ ಡಿ ಕೆ ಶಿವಕುಮಾರ್