ಕಾರವಾರ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆದ 187 ಕೋಟಿ ರೂ. ಹಗರಣ ಖಂಡಿಸಿ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ  ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ ಕರೆಯ ಮೇರೆಗೆ  ಕಾರವಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಲು ಪ್ರಯತ್ನಿಸಿದರು. ಇ ಸಂದರ್ಭದಲ್ಲಿ ಪ್ರತಿಭಟನಾಕರರನ್ನ ಪೊಲೀಸರು ಬಂಧಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿವಿಧ ಮೋರ್ಚಾದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.  ಜಿಲ್ಲೆಯ ವಿವಿಧ ಭಾಗಗಳಿಂದ  ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು.