ಕಾರವಾರ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ 18ರಿಂದ 22 ರ ವರೆಗೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ

ಈ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಪ್ರದೇಶಾದ್ಯಂತ 40 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು  ಸಮುದ್ರ ಒರಟಾಗಲಿದೆ. ಸಮುದ್ರ ಪ್ರಕ್ಷುಬ್ದಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಚ್ಚರಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ಮೀನುಗಾರಿಕೆ ನಡೆಸಲು ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು( ಬೋಟ್ ಗಳು) ಕೂಡಲೇ ದಡ ಸೇರುವಂತೆ ಉತ್ತರಕನ್ನಡ  ಜಿಲ್ಲಾಧಿಕಾರಿ  ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.