ಕಾರವಾರ :  ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಅಥವಾ ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಬಹುತೇಕ ಮಂದಿ ತಮ್ಮ ನಿವಾಸಗಳಿಗೆ ತೆರಳಿದ್ದಾರೆಂದು ಅವರು ತಿಳಿಸಿದ್ದಾರೆ. ಪ್ರಸ್ತುತ 8 ಕಾಳಜಿ ಕೇಂದ್ರಗಳಲ್ಲಿ 26 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.
ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಹೊನ್ನಾವರದಲ್ಲಿ 7 ಮತ್ತು ಕುಮಟಾ ದಲ್ಲಿ 1 ಸೇರಿದಂತೆ ಒಟ್ಟು 8 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.

ಶನಿವಾರ ಕಾಳಿ ನದಿ ವ್ಯಾಪ್ತಿಯ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣವು ಜಿಲ್ಲಾಡಳಿತ ನಿಗಧಿಪಡಿದ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳಿಗೆ ಭಾಗಶ: ಹಾನಿಯಾಗಿದೆ. ಬೆಂಗಳೂರಿನಿAದ ಆಗಮಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ಮಂಕಿಯ ಪ್ರಾಕೃತಿಕ ವಿಕೋಪ ಕೇಂದ್ರದಲ್ಲಿ ತಂಗಿದ್ದು, ಯಾವುದೇ ತುರ್ತು ಕಾರ್ಯಚರಣೆಗೆ ಸಕಲ ರೀತಿಯಲ್ಲಿ ಈ ತಂಡಗಳು ಸನ್ನದ್ದವಾಗಿವೆಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.