ಬೆಂಗಳೂರು: ಉತ್ತರಕನ್ನಡ ಜಿಲ್ಲೆಯ ಶಿರೂರು ಮತ್ತು ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ಗಳನ್ನು ತೆರವುಗೊಳಿಸಲು ಮುಂದಾಗಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ,  ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳ ವಿರುದ್ಧ ಕ್ರಮ ತೆಗೆದುಕೊಂಡು ಒಂದು ತಿಂಗಳ ಒಳಗೆ  ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.