ಭಟ್ಕಳ(Bhatkal): ಬುಡಕಟ್ಟು ಗೊಂಡ ಸಮುದಾಯದವರ(Gonda Community) ಆರಾಧ್ಯ ದೈವ ಕೊಗ್ತಿ ಶ್ರೀ ಜಟಗಾ ಮಹಾಸತಿ ದೇವಿಯ ಜಾತ್ರೆ (Kogti Jatre)  ಶ್ರದ್ಧಾ ಭಕ್ತಿ ಸಂಭ್ರಮದೊಂದಿಗೆ  ಸಂಪನ್ನವಾಯಿತು.

ಪಟ್ಟಣದ ಮಧ್ಯೆ ಕೋಕ್ತಿ ಮಹಾಸತಿ ದೇವಸ್ಥಾನದಲ್ಲಿ(Kogti Mahasati Temple) ಇಂದಿಗೂ ಗ್ರಾಮೀಣ ಪದ್ಧತಿಯಲ್ಲೇ ಜಾತ್ರೆ ನಡೆದುಕೊಂಡು ಬಂದಿದೆ. ಜಾತ್ರೆಯಲ್ಲಿ ಕಬ್ಬಿನ ಕುಡಿಯನ್ನು ಖರೀದಿಸುವುದು ಒಂದು ಪದ್ಧತಿಯಾಗಿದೆ. ಇಲ್ಲಿ ಕಬ್ಬಿನ ಕುಡಿಯನ್ನು ಕೊಂಡುಕೊಳ್ಳುವುದಕ್ಕೂ ಒಂದು ವಿಶೇಷ ಮಹತ್ವವನ್ನು ಕಲ್ಪಿಸಲಾಗಿದೆ. ಸುಗ್ಗಿಯ ಸಂಭ್ರಮದಲ್ಲಿರುವ (Suggi Celebration) ರೈತರು ತಮ್ಮ ಬಿಡುವಿನ ವೇಳೆಯಲ್ಲಿ ಜಾತ್ರೆಯಲ್ಲಿ ಬಂದು ಮನೆ ಮನೆಗೆ ಕಬ್ಬು ಕೊಂಡೊಯ್ಯಲಿ, ಆ ಕುಡಿಯು ಸಹಸ್ರ ಕುಡಿಯಾಗಿ ಮನೆ ಯಜಮಾನನ ಸಂಪತ್ತು ವೃದ್ಧಿಯಾಗಲಿ ಎನ್ನುವ ಆಶಯವಿದೆ.

ಜಾತ್ರೆಯ ನಂತರ ಮುಂದಿನ ಜಾತ್ರೆಯ ತನಕ ಮದುವೆಯಾಗಿರುವ ಗೊಂಡ ಸಮಾಜದ(Gonda Community) ನೂತನ ವಧೂ-ವರರು ಜಾತ್ರೆಗೆ ಬಂದು ಇಲ್ಲಿನ ಕೋಕ್ತಿ ಕೆರೆಯಲ್ಲಿ ಸ್ನಾನ ಮಾಡಿ ದೇವರ ದರ್ಶನವನ್ನು ಪಡೆದು ವಾಪಸು ಮನೆಗೆ ಹೋಗುವಾಗ ಕಬ್ಬಿನ ಕುಡಿಯನ್ನು ತೆಗೆದುಕೊಂಡು ಹೋದರೆ ಅವರ ಕುಟುಂಬದ ಕುಡಿ ಮುಂದುವರಿಯುವುದು ಎಂಬ ನಂಬಿಕೆಯಿತ್ತು. ಆದರೆ ಕಳೆದ ಹಲವಾರು ವರ್ಷಗಳಿಂದ ಕೋಕ್ತಿ ಕೆರೆಯಲ್ಲಿ(Kogti kere) ಹೂಳು ತುಂಬಿ ನೀರು ಕಲುಷಿತಗೊಂಡಿದ್ದರಿಂದ ಸ್ನಾನ ಮಾಡಲು ಯೋಗ್ಯವಾಗಿಲ್ಲವಾದ್ದರಿಂದ ಸ್ನಾನ ಮಾಡುವ ಪದ್ಧತಿಯನ್ನು ನಿಲ್ಲಿಸಲಾಗಿದೆ. ಹಲವರು ನಂಬಿಕೆ ಪ್ರತೀಕವಾಗಿ ಕೆರೆಯ ನೀರನ್ನು ಪ್ರೋಕ್ಷಣ್ಯ ಮಾಡಿಕೊಂಡು ದೇವರಲ್ಲಿ ಪ್ರಾರ್ಥಿಸುತ್ತಾರೆ.

ಮಹಾಸತಿ ದೇವರ ಪೂಜೆ, ಶೇಡಿ ಮರದ ಪೂಜೆ ವಿಶೇಷ ಹರಕೆಯಾಗಿದೆ. ಗುಡಿಜಟಗಾ ದೇವಸ್ಥಾನದಲ್ಲಿ ರುಂಡ ಪೂಜೆ ಸಲ್ಲಿಸಿ  ದೇವಸ್ಥಾನದಿಂದ ದೈವಾರಾಧನೆ ಮತ್ತು ಗೊಂಡರ ಸಾಂಪ್ರದಾಯಿಕ ಡಕ್ಕೆ ಕುಣಿತದೊಂದಿಗೆ  ರುಂಡಗಳನ್ನು ಮೆರವಣಿಗೆಯ ಮೂಲಕ ಕೋಕ್ತಿಯಲ್ಲಿ ಶ್ರೀ ಮಹಾಸತಿ ಪಾದದಡಿ ರುಂಡಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು. ಭಕ್ತರು ಜಾತ್ರೆಯಂದು  ದೇವಸ್ಥಾನಕ್ಕೆ ಬಂದು ತಮ್ಮ ಹರಕೆ, ಕಾಣಿಕೆಯನ್ನು ಸಲ್ಲಿಸುತ್ತಾರೆ.

ಗೊಂಡ ಸಮುದಾಯದವರಲ್ಲದೇ(Gonda Comunity) ಇತರೇ ವರ್ಗದವರು ಜಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗೊಂಡ ಸಮಾಜದ ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ ಗೊಂಡ,   ಹಿರಿಯರಾದ ಸೋಮಯ್ಯ ಗೊಂಡ ಸೇರಿದಂತೆ  ಪದಾಧಿಕಾರಿಗಳು‌ ಇದ್ದರು.

ಇದನ್ನು ಓದಿ : ಯಕ್ಷ ದಿಗ್ಗಜನ ಆಸೆ ಈಡೇರಿಸಿದ ಹಿರಿಯ ನಟಿ. ಪ್ರೇಕ್ಷಕರ ಎದುರು ಸಖತ್ ಮಿಂಚಿಂಗ್.

ದಾಂಡೇಲಿಯಲ್ಲಿ ಆನೆ ನಡೆದಿದ್ದೆ ದಾರಿ.

ಬೈಂದೂರು ಪೊಲೀಸರಿಂದ ಎಸ್ಕೇಪ್. ಅಂಕೋಲಾ ಪೊಲೀಸರಿಗೆ ಲಾಕ್.

ಅಳಿಯಂದಿರಿಗೆ ಸಂಕ್ರಾಂತಿಗೆ ನೂರಾರು ಭಕ್ಷ್ಯಗಳು. ಈ ಮಾವ ಅತ್ತೆ ಎಲ್ಲರಿಗಿಂತ ಸೂಪರ್ ಕಣ್ರೀ.

ವೈದ್ಯೆ ಮತ್ತು ನರ್ಸ್ ಆತ್ಮಹತ್ಯೆಯ ನಾಟಕ.