ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಚಲಿಸುತ್ತಿದ್ದ ವೇಳೆ ಸಾರಿಗೆ ಸಂಸ್ಥೆಯ ಬಸ್ನ ಜಾಯಿಂಟ್ ಎಕ್ಸೈಲ್(Exail) ಕಳಚಿ ಬಿದ್ದ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ(Karwar National Highway) ಸುರಂಗಮಾರ್ಗದಲ್ಲಿ(Tunnel Route) ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮುದಗಾ-ಕಾರವಾರ(Mudga-Karwar) ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಟನಲ್ ಒಳಭಾಗದಲ್ಲಿ ಸಾಗುತ್ತಿದ್ದಾಗ ಹಿಂಭಾಗದಿಂದ ಭಾರೀ ಶಬ್ದ ಕೇಳಿಬಂದಿದೆ. ತಕ್ಷಣ ಪರಿಸ್ಥಿತಿಯನ್ನು ಅರಿತು ಚಾಲಕ ಬಸ್ ನಿಲ್ಲಿಸಿದ್ದಾರೆ.
ಬಸ್ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಶಬ್ದದ ಪರಿಣಾಮ ಆತಂಕಗೊಂಡ ಪ್ರಯಾಣಿಕರು ಬಸ್ನಿಂದ ಇಳಿದು ಸುರಕ್ಷಿತ ಸ್ಥಳಕ್ಕೆ ಓಡಿದರು. ಪರಿಶೀಲನೆ ನಡೆಸಿದಾಗ ಬಸ್ನ ಜಾಯಿಂಟ್ ಎಕ್ಸೈಲ್ ಕಳಚಿ ಬಿದ್ದಿರುವುದು ಗಮನಕ್ಕೆ ಬಂದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಿಲ್ಲ. ಘಟನೆಯ ಕುರಿತು ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಬಸ್ ಅನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ. ಚಾಲಕನ ಜಾಗ್ರತೆ ಮತ್ತು ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
