ಮಂಡ್ಯ(Mandya) :  ಅಂಕೋಲಾ ತಾಲೂಕಿನ(Ankola Taluku) ಶಿರೂರು ಗುಡ್ಡ ಕುಸಿತ (Shiruru landslide)  ಘಟನೆಯಲ್ಲಿ ನಾಪತ್ತೆಯಾದ ಜಗನ್ನಾಥ್​ ಅವರ ಪುತ್ರಿ ಕೃತಿಕಾ ಗೆ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಬಿಹೆಚ್​ಇಎಲ್​​ (BHEL) ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ.

ಮಂಡ್ಯದ ಸರ್​ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿಯವರು(H D Kumarswami) ಕೃತಿಕಾ ಅವರಿಗೆ ನೇಮಕಾತಿ ಪತ್ರ ವಿತರಿಸಿದರು.

ಕೈಗಾ ಅಣು ವಿದ್ಯುತ್ ಸ್ಥಾವರದ(Kaiga thermal plant) ಬಿಹೆಚ್​ಇಎಲ್​ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್​ಡಿ ಕುಮಾರಸ್ವಾಮಿ ಅವರು  ಕೃತಿಕಾ ಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ  ಕುಮಾರಸ್ವಾಮಿ ನಡೆದುಕೊಂಡಿದ್ದಾರೆ.

ಮಂಡ್ಯ ಟು ಇಂಡಿಯಾ(Mandya to India) ಘೋಷದೊಂದಿಗೆ ಉದ್ಯೋಗ ಮೇಳ ನಡೆಸಲಾಗಿತ್ತು. ಸಾವಿರಾರು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು. ಮೇಳದಲ್ಲಿ ಮೆಕಾನ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್), ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎನ್‌ಎಂಡಿಸಿ), ಲಾಯ್ಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್), ಮತ್ತು ಜಿಂದಾಲ್ ಸ್ಟೀಲ್ ಸೇರಿದಂತೆ ಪ್ರಮುಖ ಕಂಪನಿಗಳು ನೇರ ನೇಮಕಾತಿ ನಡೆಸಿದವು.

ಇದನ್ನು ಓದಿ : ಮುರ್ಡೇಶ್ವರ ಮತ್ತು ಮಂಗಳೂರಿನಲ್ಲಿ ಪ್ರವಾಸಿ ಬಂದರು

ಬೆಂಗಳೂರಿನಿಂದ ಕಾರವಾರಕ್ಕೆ ದೀಪಾವಳಿ ವಿಶೇಷ ರೈಲು