ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ – ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಕುಮಟಾ ತಾಲೂಕಿನ ಕತಗಾಲ ಬಳಿ ರಸ್ತೆ ಹೊಳೆಯಾಗಿದ್ದು ಸಂಚಾರ ಸ್ಥಗಿತವಾಗಿದೆ. ಚಂಡಿಕಾ ಹೊಳೆ ಉಕ್ಕಿ ಹರಿದ ಪರಿಣಾಮವಾಗಿ ರಸ್ತೆಯಲ್ಲಿ ನೀರು ನುಗ್ಗಿದೆ.
ರಸ್ತೆಯಲ್ಲಿ ತುಂಬಿದ್ದರಿಂದ ಬಸ್ ಸೇರಿದಂತೆ ಕೆಲ ವಾಹನಗಳು ಸಿಲುಕಿಕೊಂದಿದೆ. ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.