ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ಬೆಳಿಗ್ಗೆ   ಭಾರೀ ಪ್ರಮಾಣದ ಭೂಕುಸಿತವಾಗಿದೆ. ಪರಿಣಾಮವಾಗಿ  20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಘಟನೆಯಲ್ಲಿ ನೂರಾರು ಮಂದಿ  ಮಣ್ಣಿನೊಳಗೆ ಸಿಲುಕಿಕೊಂಡಿರುವ ಶಂಕೆಯಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಭೂಕುಸಿತವಾದ ಪ್ರದೇಶಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ಕಳಿಸಲಾಗಿದೆ .

ಘಟನೆಯಲ್ಲಿ ಹಲವರು ಸಿಕ್ಕಿಬಿದ್ದಿರುವ ಆತಂಕವಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನ್ನು ನೀಡಿದೆ.ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಕಾರ್ಯಾಚರಣೆಗೆ ಸರ್ಕಾರ ಪ್ಲ್ಯಾನ್ ಮಾಡಿದೆ.