ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ಕಾರವಾರ(Karwar) : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉತ್ತರ ಕನ್ನಡ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ, ಗುರುವಾರ ಕಾರವಾರದ ಕಾಜುಬಾಗ್ನ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಅನುಧಾನಿತ ಪ್ರೌಢಶಾಲೆಯಲ್ಲಿ “ಸುರಕ್ಷಿತ ಬಚ್ಪನ್ ಅಭಿಯಾನ” ಅಡಿಯಲ್ಲಿ ಮಕ್ಕಳ ರಕ್ಷಣೆಗಾಗಿ ಕಾನೂನು ಅರಿವು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅನಿಲ್ ಜಾನ್ ಸಿಕ್ವೇರಾ ಅವರು ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಬಳಿಕ ವಕೀಲರಾದ ಶುಭಾ ಗಾಂವಕರ ಮತ್ತು ಕಾರವಾರ ನಗರ ಪೊಲೀಸ್ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಮಕ್ಕಳಿಗೆ ಕಾನೂನಿನ ಮಾಹಿತಿ ನೀಡಿದರು.
ಕೊನೆಯಲ್ಲಿ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಪಕ ಗಾಡ್ವಿನ್ ಅವರು ವಂದನಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.ದಿನಾಂಕ 26.10.2026 ರಿಂದ ಆರಭಗೊಂಡಿರುವ ಈ ಅಭಿಯಾನದ ಅಡಿಯಲ್ಲಿ ಈಗಾಗಲೇ ಆಮದಳ್ಳಿ ವಸತಿ ಶಾಲೆ, ಸೈಂಟ್ ಮೈಕಲ್ ಶಾಲೆ, ಕಾರವಾರ, ಸರ್ಕಾರಿ ಪ್ರೌಢ ಶಾಲೆ, ಕಾರವಾರ ಗಳಲ್ಲಿ ಬೃಹತ್ ಅರಿವು ಕಾರ್ಯಕ್ರಮಗಳನ್ನು ನಡೆಸಿದ್ದು ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಇತರ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿದೆ.
ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮಕ್ಕಳು ಸ್ವಾಗತ ಭಾಷಣ ಹಾಗೂ ಸ್ವಾಗತ ಗೀತೆಯನ್ನು ಪ್ರಸ್ತುತಪಡಿಸಿದರು.